ನಾಯಕತ್ವ ಗುಣ ಬೆಳೆಸಲು ಇಂಟರಾಕ್ಟ್ ಕ್ಲಬ್ ಸಹಕಾರಿ
ಶಿವಮೊಗ್ಗ | 31 ಜುಲೈ 2025 | ಡಿಜಿ ಮಲೆನಾಡು.ಕಾಂ
ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂಟರಾಕ್ಟ್ ಮುಖಾಂತರ ಮಕ್ಕಳಲ್ಲಿ ನಾಯಕತ್ವ ಕೌಶಲ್ಯಗಳನ್ನು ಬೆಳೆಸಲು ಸಾಧ್ಯವಾಗಲಿದೆ. ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು. ಇದು ಕೇವಲ ಕ್ಲಬ್ ಅಲ್ಲ, ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಕಿಶೋರ್ ಕುಮಾರ್ ಡಿ ಮಾತನಾಡಿ, ಈ ಶಾಲೆಯಲ್ಲಿ ಕಲಿತ ಪಾಠಗಳು ನಿಮ್ಮನ್ನು ಜೀವನದಲ್ಲಿ ಮಹಾನ್ ವ್ಯಕ್ತಿಗಳಾಗಿ ರೂಪಿಸಲಿದೆ. ವಿದ್ಯಾರ್ಥಿಗಳು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಡಾ. ಧನಂಜಯ್ ಮಾತನಾಡಿ, ಮಕ್ಕಳಲ್ಲಿ ಅಸಾಧಾರಣ ಸಾಮರ್ಥ ಹೊಂದಿರುವವರು ಇರುತ್ತಾರೆ. ನಮ್ಮ ಭವಿಷ್ಯ ನಾವೇ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಶಿಕ್ಷಣದಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು. ಇತರರ ಬದುಕನ್ನೂ ಬೆಳಗಿಸಬಹುದು ಎಂದರು.
ಟ್ರಸ್ಟ್ ಉಪಾಧ್ಯಕ್ಷೆ ನಾಗವೇಣಿ ಮಾತನಾಡಿ, ಬಡತನ ಎನ್ನುವುದು ಅಡಚಣೆಯಾಗಬಹುದು. ಆದರೆ ಅದು ಕನಸುಗಳಿಗೆ ಕಡಿವಾಣವಲ್ಲ. ನಮ್ಮ ಹಿನ್ನೆಲೆ ಏನೇ ಇರಲಿ, ಶ್ರದ್ಧೆ, ಶ್ರಮ ಮತ್ತು ನಂಬಿಕೆಯಿಂದ ನಾವು ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಬ್ಧಕೋಶಗಳನ್ನು ನೀಡಿ ಗೌರವಿಸಲಾಯಿತು. ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರೀತಮ್, ಕಾರ್ಯದರ್ಶಿಯಾಗಿ ಬನಶ್ರೀ ಅಧಿಕಾರ ವಹಿಸಿಕೊಂಡು. ಶಾಲೆಯ ವಿದ್ಯಾರ್ಥಿಗಳಿಗೆ ಡಿಕ್ಷನರಿ, ಪೆನ್, ನೋಟ್ಬುಕ್ ವಿತರಿಸಲಾಯಿತು. ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ, ಮುಷ್ತಕ್ ಆಲಿ, ಪರಮೇಶ್, ಗಣೇಶ್, ಆರ್.ಮನೋಹರ್, ಪ್ರೀತಮ್, ರೂಪ, ಬನಶ್ರಿ, ಮುಖ್ಯಶಿಕ್ಷಕ ಸೂರ್ಯನಾರಾಯಣ್ ಮತ್ತಿತರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
