ಮಗುವಿನ ಆರೋಗ್ಯದ ಬೆಳವಣಿಗೆ ಬಗ್ಗೆ ಗಮನ ವಹಿಸಿ

ಮಗುವಿನ ಆರೋಗ್ಯದ ಬೆಳವಣಿಗೆ ಬಗ್ಗೆ ಗಮನ ವಹಿಸಿ

ಶಿವಮೊಗ್ಗ | 8 ಆಗಸ್ಟ್‌ 2025 | ಡಿಜಿ ಮಲೆನಾಡು.ಕಾಂ

ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ. ಮಗು ಆರೋಗ್ಯವಾಗಿ ಇರಬೇಕು ಎಂದರೆ ಕಡ್ಡಾಯವಾಗಿ ತಾಯಿ ಎದೆ ಹಾಲು ನೀಡಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಗುರುಪುರದ ಅಂಗನವಾಡಿಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಗರ್ಭಿಣಿ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ತಾಯಿ ಎದೆ ಹಾಲು ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಗುವಿನ ಬೆಳವಣಿಗೆಗೆ ಸ್ತನ್ಯಪಾನವು ಅತ್ಯಂತ ಅವಶ್ಯಕವಾಗಿದೆ. ತಾಯಿಯ ಎದೆ ಹಾಲಿನಿಂದ ಮಗುವಿಗೆ ಉತ್ತಮ ಪೋಷಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ತಾಯಿ ಮತ್ತು ಮಗುವಿನ ನಡುವೆ ಪ್ರೀತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಮಾತನಾಡಿ, ರೋಟರಿ ಸಂಸ್ಥೆ ಸಮಾಜದಲ್ಲಿ ಆರೋಗ್ಯಕರ ವಾತಾವರಣ ಸೃಷ್ಟಿ ಮಾಡುವಲ್ಲಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದೆ. ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ತರವಾದದ್ದು. ಶಿವಮೊಗ್ಗ ನಗರದಲ್ಲಿ ಸರ್ಜಿ ಆಸ್ಪತ್ರೆ ಜೊತೆಗೂಡಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ತೆರೆಯಲಾಗಿದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ಪರಿಸರ, ರಸ್ತೆ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದರು.

ವಲಯ ಸೇನಾನಿ ಕಿರಣ್‌ಕುಮಾರ್ ಜಿ ಮಾತನಾಡಿ, ಹೆಚ್ಚು ಹೆಚ್ಚು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ನಡೆಸಬೇಕು ಎಂದರು. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸುಲೋಚನಾ ಅವರು ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕುರಿತು ಮಾಹಿತಿ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಎಫ್ ಪಿ ಎ ಐ ನ ಸತೀಶ್ ಹಾಗೂ ಅಂಗನವಾಡಿಯ ಮೆಹರುನ್ನೀಸಾ, ಸೋನಾ ಬಾಯಿ ಮತ್ತು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಜ್ಯೋತಿ ಶ್ರೀರಾಮ್, ಮಥುರಾ ಧನಂಜಯ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಜೀವನಶೈಲಿಯಲ್ಲಿ ಸರಳ ಬದಲಾವಣೆಗಳಿಂದ ಉತ್ತಮ ಆರೋಗ್ಯ

digimalenadu

ಶಿವಮೊಗ್ಗ
error: Content is protected !!