ಉದ್ಯೋಗ ಕ್ಷೇತ್ರಕ್ಕೆ ನೆರವಾಗುವ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ

ಉದ್ಯೋಗ ಕ್ಷೇತ್ರಕ್ಕೆ ನೆರವಾಗುವ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ

ಶಿವಮೊಗ್ಗ | 13 ಆಗಸ್ಟ್‌ 2025 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಗಳು ಸಹಕಾರಿ‌ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ, ಮಾಜಿ ಗೃಹಮಂತ್ರಿ ಪಿಜಿಆರ್ ಸಿಂಧ್ಯಾ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನಿಪುಣ್ ಪರೀಕ್ಷಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ನಂತರ ಉದ್ಯೋಗ ಕ್ಷೇತ್ರಕ್ಕೆ ಕಾಲಿಟ್ಟಾಗ, ವಿಶೇಷವಾಗಿ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಸ್ಕೌಟ್ ತರಬೇತಿ ಪಡೆದ ಪ್ರಮಾಣ ಪತ್ರ, ದಾಖಲೆಗಳು ನೆರವಾಗುತ್ತವೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಜೀವನವನ್ನು ಸುಂದರವಾಗಿಸಿಕೊಳ್ಳಲು ವಿದ್ಯೆಯ ಜತೆಗೆ ಸ್ಕೌಟ್ಸ್ ಚಳವಳಿಯಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣರಾಗುತ್ತಾರೆ. ಶಿವಮೊಗ್ಗ ಜಿಲ್ಲಾ ಶಾಖೆ ತುಂಬಾ ವ್ಯವಸ್ಥಿತ ಕಾರ್ಯಕ್ರಮಗಳನ್ನು ರೂಪಿಸಿ ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಭಾರತ್ ಸ್ಕೌಟ್ಸ್ ಅಂಡ್ ಜಿಲ್ಲಾ ಗೈಡ್ಸ್ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಅಧಿಕಾರ ವಹಿಸಿಕೊಂಡ ನಂತರ ಹಲವಾರು ಪ್ರಮುಖ ಕಾರ್ಯಕ್ರಮಗಳನ್ನು ರಾಜ್ಯ ಸಂಸ್ಥೆ ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸಿಕೊಂಡು ಬಂದಿದ್ದೇವೆ. ಸ್ಕೌಟ್ಸ್ ಅಂಡ್ ಗೈಡ್ಸ್ ಚಳವಳಿಯಲ್ಲಿ ತೊಡಗಿಸಿಕೊಂಡು ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಗಳಲ್ಲಿ ಸ್ಕೌಟ್ ಘಟಕಗಳು ಸ್ಥಾಪನೆ ಆಗಬೇಕು. ಮನೆ ಮನೆಗೆ ಸ್ಕೌಟ್ ತಲುಪಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ರಾಜ್ಯ ಸಂಘಟನಾ ಆಯುಕ್ತೆ ಮಂಜುಳಾ, ಕೇಂದ್ರ ಸ್ಥಾನಿಕ ಆಯುಕ್ತ ಜಿವಿಜಯಕುಮಾರ್, ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ಖಜಾಂಚಿ ಚೂಡಾಮಣಿ ಪವಾರ್, ಜಿಲ್ಲಾ ರೋವರ್ ಆಯುಕ್ತ ಕೆ ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ತರಬೇತಿ ಆಯುಕ್ತ ಎಚ್.ಶಿವಶಂಕ್ರಪ್ಪ, ಕೃಷ್ಣಸ್ವಾಮಿ,  ಲಕ್ಷ್ಮೀ ಕೆ ರವಿ, ವಿನಯ ಭೂಷಣ್, ಎಚ್.ಜ್ಯೋತಿ, ಪರಿಮಳಾ, ಮಂಜುಳಾ, ಗಣಪತಿ, ರಮ್ಯಾ,  ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್, ರುದ್ರಪ್ಪ ಚಿಲೂರು, ಎನ್.ಆರ್.ಚಂದ್ರಶೇಖರ್, ದೇವಪ್ಪ, ಸಂಗೀತಾ ಬಗಲಿ, ಬಸವಣ್ಣಪ್ಪ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ವಿದ್ಯಾರ್ಥಿಗಳು ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗದಿರಿ

digimalenadu

ಶಿವಮೊಗ್ಗ
error: Content is protected !!