ಕಣ್ಣಿನ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ

ಕಣ್ಣಿನ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ

ಶಿವಮೊಗ್ಗ | 20 ಆಗಸ್ಟ್‌ 2025 | ಡಿಜಿ ಮಲೆನಾಡು.ಕಾಂ

ಮಕ್ಕಳು ಪ್ರತಿ ವರ್ಷ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್‌ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಶೀರ್ವಾದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣ ಶಿಬಿರದ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಕ್ಕಳು ಓದುವಾಗ ಅಥವಾ ಕೆಲಸ ಮಾಡುವಾಗ ಸಾಕಷ್ಟು ಬೆಳಕು ಇರಬೇಕು. ಕಣ್ಣುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಕಣ್ಣಿನ ಸೋಂಕುಗಳನ್ನು ತಪ್ಪಿಸಲು ನಿಮ್ಮ ಕೈಗಳನ್ನು ಸ್ವಚ್ಛವಾಗಿಡಬೇಕು. ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಕಣ್ಣಿನ ಪರೀಕ್ಷೆ ಮಾಡಿಸುವುದರ ಮುಖಾಂತರ ಸಂಭವಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಕಿಶೋರ್ ಕುಮಾರ್ ಡಿ ಮಾತನಾಡಿ, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ವಹಿಸಬೇಕು. ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂದರು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಡಾ. ಧನಂಜಯ ಮಾತನಾಡಿ, ಕಣ್ಣು ನಮ್ಮ ದೇಹದಲ್ಲಿ ಅತ್ಯಂತ  ಪ್ರಮುಖ ಅಂಗವಾಗಿದೆ. ಪ್ರತಿಯೊಬ್ಬರು ಕಣ್ಣಿನ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದರು.

ಆಶೀರ್ವಾದ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ  ಡಾ. ಅರುಣ್ ಮಾತನಾಡಿ, ಕಣ್ಣಿನ ಆರೋಗ್ಯದ ಲಕ್ಷಣಗಳು, ಕಣ್ಣಿನ ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು, ಕಣ್ಣಿನ ಆರೈಕೆ ಸಲಹೆಗಳಿಂದ ಹಿಡಿದು ಕಣ್ಣಿನ ಚಿಕಿತ್ಸೆಗಳವರೆಗೆ ಹಲವಾರು ವಿಷಯಗಳ ಜತೆಗೆ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದ ಕಣ್ಣಿನ ಪರೀಕ್ಷೆ ಮಾಡಿಸುವುದರ ಪ್ರಯೋಜನದ ಬಗ್ಗೆ ವಿವರಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಮಕ್ಕಳು ನೇತ್ರ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಲಾಯಿತು. ರೋಟರಿ ಸಂಸ್ಥೆಯ ಆರ್.ಮನೋಹರ್, ಪ್ರಿಯಾಂಕಾ, ಯಶಸ್ವಿನಿ, ಮುಖ್ಯಶಿಕ್ಷಕ ಸೂರ್ಯನಾರಾಯಣ್, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸುಶಿಕ್ಷಿತ ಯುವ ಸಮೂಹ ದೇಶದ ಆಶಾಕಿರಣ

digimalenadu

ಶಿವಮೊಗ್ಗ
error: Content is protected !!