ವಿಶ್ವದ ಎಲ್ಲೆಡೆ ಆಧ್ಯಾತ್ಮದ ಕಾರ್ಯ
ಶಿವಮೊಗ್ಗ | 24 ಆಗಸ್ಟ್ 2025 | ಡಿಜಿ ಮಲೆನಾಡು.ಕಾಂ
ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯವು ಆಧ್ಯಾತ್ಮ ಮತ್ತು ಧ್ಯಾನದ ಬಗ್ಗೆ ತರಬೇತಿ ನೀಡಿ ಶಾಂತಿ, ಪ್ರೀತಿ, ಏಕತೆ, ಸದ್ಭಾವನೆಯನ್ನು ಜನರಲ್ಲಿ ಮೂಡಿಸುತ್ತಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಅನಸೂಯ ಅಕ್ಕ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ನವುಲೆ ಸೇವಾ ಕೇಂದ್ರದಿಂದ ಆಯೋಜಿಸಿದ್ದ ವಿಶ್ವ ಬಂಧುತ್ವ ದಿನ ಹಾಗೂ ಬೃಹತ್ ರಕ್ತದಾನ ಅಭಿಯಾನದಲ್ಲಿ ಮಾತನಾಡಿ, ಆಧ್ಯಾತ್ಮ ಮೌಲ್ಯಗಳನ್ನು ಸಂಸ್ಥೆ ವಿಶ್ವಾದ್ಯಂತ ಬಿತ್ತರಿಸುತ್ತಿದೆ ಎಂದು ತಿಳಿಸಿದರು.
ವಿಶ್ವ ಬಂಧುತ್ವ ದಿನದ ಅಂಗವಾಗಿ ಭಾರತ ಮತ್ತು ನೇಪಾಳ ಸೇರಿ ಒಂದು ಲಕ್ಷಕ್ಕೂ ಹೆಚ್ಚು ಯೂನಿಟ್‌ಅನ್ನು ರಕ್ತದಾನ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಬ್ರಹ್ಮಕುಮಾರಿ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿ ದಾದಿ ಪ್ರಕಾಶ ಮಣಿ ಜೀ ಅವರ 18ನೇ ಪುಣ್ಯ ತಿಥಿಯನ್ನು ವಿಶ್ವ ಬಂಧುತ್ವ ದಿನ ಎಂದು ಆಚರಿಸಲಾಗುತ್ತಿದೆ. ಆ. 22 ರಿಂದ 25ರವರೆಗೆ ಭಾರತ ಮತ್ತು ನೇಪಾಳದ 1,500ಕ್ಕೂ ಹೆಚ್ಚು ಬ್ರಹ್ಮಕುಮಾರಿ ಸೇವಾ ಕೇಂದ್ರಗಳಲ್ಲಿ ನೂರು ಗಂಟೆಗಳಲ್ಲಿ 1,00,000 ಯೂನಿಟ್ ರಕ್ತ ಸಂಗ್ರಹಿಸಿ ಸಾರ್ವಜನಿಕರ ಆರೋಗ್ಯಕ್ಕಾಗಿ ನೀಡುವ ಗುರಿ ಹೊಂದಲಾಗಿದೆ. ಗಿನ್ನಿಸ್ ವಿಶ್ವ ದಾಖಲೆ ಸ್ಥಾಪಿಸಲಾಗುವುದು ಎಂದರು.
ನವುಲೆ ಶಾಖೆ ಸಂಚಾಲಕಿ ಬಿ.ಕೆ.ಸ್ವಾತಿ ಅಕ್ಕ ಮಾತನಾಡಿ, ರಕ್ತ ಶರೀರಕ್ಕೆ ಶಕ್ತಿ. ಆಧ್ಯಾತ್ಮ ಆತ್ಮಕ್ಕೆ ಶಕ್ತಿ ನೀಡುತ್ತದೆ. ಒಂದು ತಿಂಗಳಿನಿಂದ ವಿವಿಧ ಸಂಘ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಆರೋಗ್ಯಕ್ಕೂ ಅನುಕೂಲಗಳಿವೆ. ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡಬೇಕು ಎಂದು ತಿಳಿಸಿದರು. ರಕ್ತದಾನಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಲಾಯಿತು. ಜಿಲ್ಲಾ ಮೆಗಾನ್ ಬೋಧನಾ ಆಸ್ಪತ್ರೆ ವೈದ್ಯೆ ಡಾ. ಗೀತಾ ಲಕ್ಷ್ಮೀ ಅವರು ರಕ್ತದಾನದ ಮಹತ್ವ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಮೇರಾ ಯುವ ಭಾರತ್ ಶಿವಮೊಗ್ಗ ಸಂಸ್ಥೆಯ ಜಿಲ್ಲಾ ಯುವ ಅಧಿಕಾರಿ ಸ್ನೇಹಲತಾ, ಎಂ.ರಮೇಶ್, ಜೆಎನ್‌ಎಸ್‌ಸಿಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್, ಜಿಲ್ಲಾ ಬೋಧನಾ ಆಸ್ಪತ್ರೆಯ ಹನುಮಂತಪ್ಪ, ಡಾ. ವೈಶಾಕ್, ಡಾ. ದಿಲೀಪ್ರಿಯ, ಮಂಜು, ರಾಜು, ಸಿಬ್ಬಂದಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸದಸ್ಯರು, ಸಂಚಾಲಕರು, ರಕ್ತದಾನಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
