ಸರಿಯಾದ ಜೀವನಶೈಲಿ ಪಾಲಿಸುವುದರಿಂದ ಉತ್ತಮ ಆರೋಗ್ಯ
ಶಿವಮೊಗ್ಗ | 26 ಆಗಸ್ಟ್ 2025 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಸರಿಯಾದ ಜೀವನಶೈಲಿ ಪಾಲಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ಮೂರ್ತಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು, ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಾಪೂಜಿ ಮೆಡಿಕಲ್ ಕಾಲೇಜು ವತಿಯಿಂದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಆರೋಗ್ಯ ಶಿಬಿರ ಸೇರಿದಂತೆ ವೈವಿಧ್ಯ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ನಮ್ಮ ಸಂಸ್ಥೆಯು ವರ್ಷಪೂರ್ತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ ಎಂದು ತಿಳಿಸಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಪ್ರತಿಭಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ರೋಟರಿಯ ಸೇವಾ ಕಾರ್ಯಗಳನ್ನು ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಬಾಪೂಜಿ ಕಾಲೇಜಿನ ವೈದ್ಯರು ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲಿಸಿದರು. ರೋಟರಿ ಸಂಸ್ಥೆಯ ಸ್ವಪ್ನಾ, ಸ್ಮಿತಾ ಹಾಗೂ ಎಫ್‌ಪಿಎಐನ ಸತೀಶ್ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕದ ಪ್ರಮುಖರು ಹಾಗೂ ಸಹ ಶಿಕ್ಷಕರು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
