ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಶಿವಮೊಗ್ಗ | 12 ಸೆಪ್ಟೆಂಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸೆ.15ರಂದು ಬೆಳಗ್ಗೆ 10.30ಕ್ಕೆ ಇಂಜಿನಿಯರ್ಸ್‌ ದಿನ, ಭಾರತರತ್ನ ಡಾ. ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಹಾಗೂ ಟಿ.ವಿ.ನಾರಾಯಣ ಶಾಸ್ತ್ರಿ ಅವರ ಜನ್ಮಶತಮಾನೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಗೋಪಿನಾಥ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಾಂತಲಾ ಸ್ಪೆರೋಕಾಸ್ಟ್‌ ಸಭಾಂಗಣದಲ್ಲಿ ಆಯೋಜಿಸಿರುವ ಇಂಜಿನಿಯರ್ಸ್‌ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸುವರು. ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ರುದ್ರೇಗೌಡ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಭಾರತೀಯ ಸಣ್ಣ ಕೈಗಾರಿಕೆಗಳ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಎಂ.ರಾಜು ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಚೇನಹಳ್ಳಿಯಲ್ಲಿರುವ ಮೆಕ್‌ ವೈರ್ಸ್‌, ಕಲ್ಲೂರು ಮಂಡ್ಲಿಯಲ್ಲಿರುವ ದುಗಾ ಅಲಾಯ್ಸ್‌, ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಪ್ರಕಾಶ್‌ ಸೈನ್‌ ಸಿಸ್ಟಂಸ್‌ ಅವರಿಗೆ 2025ನೇ ಸಾಲಿನ ಕೈಗಾರಿಕಾ ಪ್ರಶಸ್ತಿ ನೀಡಲಾಗುತ್ತಿದೆ. ಪಿಯರ್‌ ಲೈಟ್‌ ಲೈನರ್ಸ್‌ ಸಂಸ್ಥೆಯ ಬಿ.ಸಂತೋಷ್‌ ಹಾಗೂ ಮಲ್ನಾಡ್‌ ಅಲಾಯ್‌ ಕಾಸ್ಟಿಂಗ್‌ ಸಂಸ್ಥೆ ಪಿ.ಕೆ.ವಿಜಯ್‌ ಅವರಿಗೆ ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ರಸಪ್ರಶ್ನೆ ಕ್ವಿಜ್ ವಿಜೇತ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಬಗ್ಗೆ ಭಾಷಣ ಸ್ಪರ್ಧೆಯ ವಿಜೇತ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್‌, ಕಾರ್ಯದರ್ಶಿ ಎಂ.ಸುರೇಶ್, ಖಜಾಂಚಿ ಆರ್‌.ಮನೋಹರ, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಜಿ.ವಿ.ಕಿರಣ್ ಕುಮಾರ್, ವಸಂತ ಹೋಬಳಿದಾರ್, ಗಣೇಶ  ಎಂ.ಅಂಗಡಿ, ರವಿಪ್ರಕಾಶ್ ಜನ್ನಿ ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ನಿವೇದಿತಾ ವಿಕಾಸ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ

digimalenadu

ಶಿವಮೊಗ್ಗ
error: Content is protected !!