ಜೆಎನ್ಎನ್ ಕಾಲೇಜಿನ ಎಂಬಿಎ ವಿಭಾಗದಿಂದ ಉದ್ಯೋಗ ಮೇಳ, 80 ವಿದ್ಯಾರ್ಥಿಗಳಿಗೆ ಉದ್ಯೋಗ
ಶಿವಮೊಗ್ಗ | 16 ಸೆಪ್ಟೆಂಬರ್ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದಿಂದ ಕೆ-12 ಟೆಕ್ನೊ ಸರ್ವೀಸ್ ಕಂಪನಿ ಸಂಯುಕ್ತಾಶ್ರಯದಲ್ಲಿ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 80 ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಉದ್ಯೋಗ ಮೇಳದಲ್ಲಿ 170 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಮೇಳದಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು,ಬಿಸಿನೆಸ್ ಡೆವಲಪ್‌ಮೆಂಟ್ ಅಸೋಸಿಯೇಟ್ (BDA), ಪೇರೆಂಟ್ ರಿಲೇಷನ್‌ಶಿಪ್ ಮ್ಯಾನೇಜರ್ (PRM) ಮತ್ತು ಸ್ಕೂಲ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ 4 ಲಕ್ಷದಿಂದ 5.20 ಲಕ್ಷ ರೂ.ವರೆಗಿನ ವಾರ್ಷಿಕ ವೇತನವುಳ್ಳ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಅಭಿನಂದಿಸಿದರು. ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಸಿ.ಶ್ರೀಕಾಂತ್ ಮಾತನಾಡಿ, ವಿದ್ಯಾಸಂಸ್ಥೆಗಳಲ್ಲಿ ಏರ್ಪಡಿಸುವ ಉದ್ಯೋಗ ಮೇಳಗಳು ಪದವಿ ಜತೆಗೆ ಕೈಗಾರಿಕಾ ಅನುಭವ ಮತ್ತು ಉದ್ಯೋಗಾರ್ಹತೆ ಕೌಶಲ್ಯತೆಗಳ ಕುರಿತ ಅವಲೋಕನ ನಡೆಸಲು ಪೂರಕ ವೇದಿಕೆಯಾಗಿದೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾರ್ಯಕ್ರಮದಲ್ಲಿ ಕೆ-12 ಟೆಕ್ನೊ ಸರ್ವೀಸ್ ಕಂಪನಿಯ ಸಿಎಚ್‌ಆರ್‌ಒ ರಾಹುಲ್ ಸಿಂಗ್, ಅಸೋಸಿಯೇಟ್ ಸಿಇಒ ನಿತ್ಯಶ್ರೀ, ಎಂ.ಬಿ.ಎ ವಿಭಾಗದ ಪ್ಲೇಸ್‌ಮೆಂಟ್ ಸಂಯೋಜಕ ಡಾ. ಹರ್ಷ ಸಿ. ಮಠದ್ ಮತ್ತು ಡಾ. ಪ್ರವೀಣ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
