ಗುರಿಗಳ ಸಾಕಾರಕ್ಕೆ ವ್ಯಕ್ತಿತ್ವ ವಿಕಸನದೆಡೆಗೆ ಸಾಗಿ, ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಮೇಧಾ ಪರ್ವ
ಶಿವಮೊಗ್ಗ | 21 ಸೆಪ್ಟೆಂಬರ್ 2025 | ಡಿಜಿ ಮಲೆನಾಡು.ಕಾಂ
ಯಶಸ್ಸಿನ ಗುರಿಯನ್ನು ಸಾಧಿಸಲು ವ್ಯಕ್ತಿತ್ವ ವಿಕಸನದೆಡೆಗೆ ಸಾಗಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಚಟುವಟಿಕೆಗಳ ಘಟಕದಿಂದ ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮ್ಯಾನೇಜ್ಮೆಂಟ್ ಫೆಸ್ಟ್ ಮೇಧಾ ಪರ್ವ 2025 ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಅಂಕಗಳೊಂದಿಗೆ ಉತ್ತಮ ವ್ಯಕ್ತಿತ್ವ, ಕೌಶಲ್ಯಾಧಾರಿತ ಚಿಂತನೆಗಳನ್ನು ಗಳಿಸಬೇಕು. ಸ್ಪರ್ಧಾ ಜಗತ್ತಿನಲ್ಲಿ ಧೈರ್ಯ, ಆತ್ಮವಿಶ್ವಾಸ, ಗಟ್ಟಿ ನಿಲುವುಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಟಿಎನ್ಸಿಸಿ ಪ್ರಾಚಾರ್ಯೆ ಪ್ರೊ. ಟಿ.ಆರ್.ಮಮತಾ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಗಳು ಬುನಾದಿ. ಮೊಬೈಲ್ ಖರೀದಿಸುವಾಗ ಉತ್ತಮ ಹೊಸ ನಾವೀನ್ಯ ಲಕ್ಷಣಗಳು ಬೇಕು ಎಂದು ಹುಡುಕುತ್ತೇವೆ. ಆದರೆ ಬದುಕಿನಲ್ಲಿ ವಿಭಿನ್ನ ವ್ಯಕ್ತಿತ್ವ ಲಕ್ಷಣಗಳನ್ನು ಅಳವಡಿಸಿಕೊಳ್ಳುವಲ್ಲಿ ಎಷ್ಟು ಚಿಂತನಶೀಲರಾಗಿದ್ದೇವೆ ಎಂಬುದರ ಅವಲೋಕನವನ್ನು ಯುವ ಸಮೂಹ ಮಾಡಿಕೊಳ್ಳಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮ್ಯಾನೇಜ್ಮೆಂಟ್ ಘಟಕದ ಕಾರ್ಯಕ್ರಮಾಧಿಕಾರಿ ಅರುಣ್ ಕುಮಾರ್ ಎಂ.ಎಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ 13 ಮ್ಯಾನೇಜ್ಮೆಂಟ್ ಮತ್ತು ತಾಂತ್ರಿಕ ವಿಷಯಾಧಾರಿತ ಸ್ಪರ್ಧಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹಭರಿತರಾಗಿ ಭಾಗವಹಿಸಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಪ್ರಾಮುಖ್ಯತೆ, ಇಸ್ರೋ ವಿಜ್ಞಾನಿ ಚೈತ್ರಾ ರಾವ್ ಅವರ ಪ್ರೇರಣಾದಾಯಕ ಸಂದೇಶ
