ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳುವುದು ಅವಶ್ಯ
ಶಿವಮೊಗ್ಗ | 6 ಅಕ್ಟೋಬರ್ 2025 | ಡಿಜಿ ಮಲೆನಾಡು.ಕಾಂ
ಪ್ರತಿಯೊಬ್ಬರೂ ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ 15 ದಿನಗಳ ಉಚಿತ ಯೋಗ ಪ್ರಾಣಾಯಾಮ. ಹಾಗೂ ಧ್ಯಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಬಂಟರ ಭವನದಲ್ಲಿ ಈಗಾಗಲೇ ಅನೇಕ ಉಚಿತ ಆರೋಗ್ಯ ಶಿಬಿರ, ಯಕ್ಷಗಾನ ಪ್ರದರ್ಶನ ಹಾಗೂ ಇತರ ಕಲಾಪ್ರದರ್ಶನಗಳನ್ನು ನಡೆಸಿಕೊಡುವುದರ ಮುಖಾಂತರ ಬಂಟರ ಭವನವನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಲಾಗಿದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳಿಂದ ಪ್ರತಿಯೊಬ್ಬರು ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.
ಯೋಗ ಶಿಬಿರದ ಮುಖಾಂತರ ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ಬದಲಾಯಿಸಿಕೊಂಡು ಉತ್ತಮ ಆರೋಗ್ಯ ಪಡೆಯಲು ಪ್ರತಿಯೊಬ್ಬರು ಮುಂದಾಗಬೇಕು. ನಗರದಲ್ಲಿ ಈಗಾಗಲೇ 38 ಕಡೆ ಉಚಿತವಾಗಿ ಯೋಗವನ್ನು ತರಬೇತಿ ಶಿಬಿರ ನಡೆಸುವುದರ ಮುಖಾಂತರ ಮನೆ ಮನೆಗಳಿಗೂ ತಲುಪಿಸುತ್ತಿದ್ದೇವೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾರ್ಯದರ್ಶಿ ಸುರೇಶ್ ಶೆಟ್ಟಿ, ನಿರ್ದೇಶಕ ದಿವಾಕರ್ ಶೆಟ್ಟಿ, ಶಿವಗಂಗಾ ಯೋಗ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ.ವಿಜಯಕುಮಾರ್, ಯೋಗ ಕೇಂದ್ರದ ಟ್ರಸ್ಟಿ ಎಂ.ಪಿ.ಆನಂದಮೂರ್ತಿ, ಯೋಗ ಶಿಕ್ಷಕರಾದ ವಿಜಯ ಬಾಯರಿ, ಕಾಟನ್ ಜಗದೀಶ್, ಕಿರಣ್, ಗಿರೀಶ್, ನೂರಾರು ಯೋಗಪಟುಗಳು ಉಪಸ್ಥಿತರಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
