ಪರವಾನಗಿ ಪಡೆದು ಉದ್ಯಮ ನಡೆಸುವುದು ಅಗತ್ಯ
ಶಿವಮೊಗ್ಗ | 11 ಅಕ್ಟೋಬರ್ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಪ್ರತಿಯೊಬ್ಬ ಆಹಾರ ಉದ್ದಿಮೆದಾರರು ಮಾರಾಟ ಮಾಡುವ ಕ್ಷೇತ್ರದಲ್ಲಿ ಹಾಗೂ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪರವಾನಗಿ ಪತ್ರ ಪಡೆದುಕೊಂಡು ಉದ್ಯಮ ನಡೆಸಬೇಕು ಎಂದು ತಹಸೀಲ್ದಾರ್ ( ಗ್ರೇಡ್ 1 ) ಲಿಂಗರಾಜ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಗ್ಲೋಬಲ್ ಇನ್‌ಸ್ಟಿಟ್ಯೂಟ್ ಎಜುಕೇಷನ್ ಅಂಡ್ ರಿಸರ್ಚ್ ಫೌಂಡೇಶನ್, ಶಿವಮೊಗ್ಗ ಆಹಾರ ಸುರಕ್ಷತಾ ಮತ್ತು ಪ್ರಮಾಣ ಪತ್ರ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಸಾಕಷ್ಟು ಜನ ಬೀದಿ ಬದಿಯ ವ್ಯಾಪಾರಸ್ಥರು ಇದ್ದು, ಗ್ರಾಹಕರಿಗೆ ಗುಣಮಟ್ಟದ ಆಹಾರವನ್ನು ನೀಡಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ಸಮುದಾಯ ವ್ಯವಹಾರಿಕ ಅಧಿಕಾರಿ ಅನುಪಮಾ.ಟಿ.ಆರ್ ಮಾತನಾಡಿ, ಪಾಲಿಕೆ ಮತ್ತು ಇಲಾಖೆಯಿಂದ ನೀಡುವ ಪರವಾನಗಿ ಪತ್ರವನ್ನು ವ್ಯಾಪಾರದ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶನ ಮಾಡಬೇಕು ಹಾಗೂ ಇಲಾಖೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ತಪ್ಪಿದಲ್ಲಿ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ನಾವು ಬಳಸುವ ಪದಾರ್ಥಗಳು ಉತ್ತಮ ಗುಣಮಟ್ಟ ಇರುವುದರ ಜೊತೆಗೆ ನಾವು ಆಹಾರ ಪದಾರ್ಥವನ್ನು ತಯಾರು ಮಾಡುವ ಸ್ಥಳಗಳು ಸ್ವಚ್ಛತೆಯಿಂದ ಇರಬೇಕು ಎಂದರು.
ಮಥುರಾ ಫುಡ್ ಪ್ರೊಡಕ್ಟ್ ಸಂಸ್ಥಾಪಕಿ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಗ್ರಾಹಕರ ಆರೋಗ್ಯವನ್ನು ಕಾಪಾಡುವ ಕಾಯಕ ನಮ್ಮದು. ಗುಣಮಟ್ಟದ ನೀರು, ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ನೀಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್ ಮಾತನಾಡಿ, ಇಂತಹ ಕಾರ್ಯಗಾರಗಳು ಕೇವಲ ಪರವಾನಗಿ ಪತ್ರಕ್ಕೆ ಮಾತ್ರ ಸೀಮಿತವಾಗದೆ ಪ್ರತಿಯೊಂದು ಅಂಶವನ್ನು ಗಣನೆಗೆ ತೆಗೆದುಕೊಂಡು ಕಡ್ಡಾಯವಾಗಿ ನಾವುಗಳು ಪಾಲನೆ ಮಾಡಬೇಕು ಎಂದರು.
ನಾಗರಿಕ ಹೋರಾಟ ಸಮಿತಿಯ ಅಶೋಕ್ ಗಾಂಧಿ ಮಾತನಾಡಿ, ಆಹಾರ ತಯಾರಿಸುವಾಗ ಸ್ವಚ್ಛ ಪರಿಸರ ಹೊಂದಿರಬೇಕು ಎಂದರು. ಜಗಜ್ಯೋತಿ ಬಸವೇಶ್ವರ ಮಹಿಳಾ ಸೇವಾ ಟ್ರಸ್ಟ್ ರಾಜ್ಯಾಧ್ಯಕ್ಷೆ ಡಾ. ನಾಗರತ್ನ ಮಾತನಾಡಿ, ಬೀದಿ ಬದಿ ವ್ಯಾಪಾರಸ್ಥರಿಗೆ ಸಾಕಷ್ಟು ಸಾಲ ಸೌಲಭ್ಯಗಳು ಸರ್ಕಾರದ ಸವಲತ್ತುಗಳು ಇವೆ ಎಂದು ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಜಿಲ್ಲಾ ಸಂಯೋಜನಾಧಿಕಾರಿ ಬಿ.ಟಿ.ಹನುಮಂತಯ್ಯ ಮಾತನಾಡಿ, ವಿಶೇಷ ಕಾರ್ಯಗಾರದಲ್ಲಿ ಮಾಹಿತಿ ಪಡೆದು ಕೆಲಸದ ಸ್ಥಳಗಳಲ್ಲಿ ಇಲಾಖೆಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
ಆಹಾರ ಸುರಕ್ಷತೆ ಮತ್ತು ಪ್ರಮಾಣ ಪತ್ರ ಕೇಂದ್ರ ರಾಜ್ಯ ಮುಖ್ಯಸ್ಥ ರಾಘವೇಂದ್ರ ಶೆಟ್ಟಿ ಮಾತನಾಡಿ, ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ ಎಂದರು.
ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಅಧ್ಯಕ್ಷ ಮಣಿ ಗೌಡರ್, ದಿನೇಶ್ ಎಂ. ಹಾಗೂ ಬೀದಿ ಬದಿ ವ್ಯಾಪಾರಸ್ಥರು ಉದ್ದಿಮೆದಾರರು ಉಪಸ್ಥಿತರಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
