ದೇಶದ ಉನ್ನತಿಕರಣಕ್ಕೆ ಗುಣಾತ್ಮಕ ಸಂಶೋಧನೆ ಅವಶ್ಯಕ

ದೇಶದ ಉನ್ನತಿಕರಣಕ್ಕೆ ಗುಣಾತ್ಮಕ ಸಂಶೋಧನೆ ಅವಶ್ಯಕ

ಶಿವಮೊಗ್ಗ | 11 ಅಕ್ಟೋಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಗುಣಾತ್ಮಕ ಸಂಶೋಧನೆಗಳು ದೇಶದ ಉನ್ನತಿಕರಣಕ್ಕೆ ಪ್ರಬಲವಾದ ಶಕ್ತಿಯಾಗಿದೆ ಎಂದು ಬೆಂಗಳೂರಿನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರದ ಸಂಶೋಧನಾ ಸಹಾಯಕ ಡೀನ್ ಡಾ. ಪಿ.ವಿ.ಶಿವಪ್ರಸಾದ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ನಗರದ ಜೆ.ಎನ್.ಎನ್  ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಸಮಿತಿಯಿಂದ ಪಿಹೆಚ್‌ಡಿ ಸಂಶೋಧನಾರ್ಥಿಗಳಿಗಾಗಿ ಏರ್ಪಡಿಸಿದ್ದ ಸಂಶೋಧನಾ ಸವಾಲುಗಳು ಮತ್ತು ಅವಕಾಶಗಳು ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಒಂದು ನಾಣ್ಯದ ಎರಡು ಮುಖ. ಸಂಶೋಧನೆಯ ಫಲಿತಾಂಶದಲ್ಲಿ ಹೆಚ್ಚು ನಿಖರತೆಯನ್ನು ನೀಡಲು ಪ್ರಯತ್ನಿಸಿ. ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳಲ್ಲಿ, ವೃತ್ತಿಪರ ಶಿಕ್ಷಣ ಎಂದರೆ, ಕೇವಲ ಉದ್ಯೋಗ ಪಡೆಯುವ ಮಾರ್ಗವೆಂಬ ಕಲ್ಪನೆಯಲ್ಲಿದ್ದಾರೆ. ಸಂಶೋಧನಾ ಪ್ರಕಿಯೆಗೆ ಸಿಗುವ ಫೆಲೋಶಿಪ್ ಮತ್ತು ಸೌಲಭ್ಯಗಳನ್ನು ತಾಳೆ ಹಾಕಿದಾಗ, ಅದು ಉದ್ಯೋಗದ ಪ್ಯಾಕೇಜ್ ಗಿಂತ ಉತ್ತಮವಾಗಿರುವುದು ಗಮನಾರ್ಹ ವಿಚಾರವಾಗಿದೆ. ಉದ್ಯೋಗಕ್ಕಿಂತ ಮೊದಲು ಪದವಿ ಪಡೆದ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚು ಪ್ರಾಧಾನ್ಯತೆ ನೀಡುವುದು ಉತ್ತಮ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸಂಶೋಧಕರು ಯಾವಾಗಲೂ ಸಾಮಾಜಿಕವಾಗಿ ಜಾಗೃತರಾಗಿರಬೇಕು, ಅಧ್ಯಯನಶೀಲರಾಗಿರಬೇಕು, ಇದರಿಂದ ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ನಾವೀನ್ಯತೆಯ ಮೂಲಕ ಪರಿಹರಿಸುವ ಅವಕಾಶ ಲಭ್ಯವಾಗಲಿದೆ.ವಿದ್ಯಾಸಂಸ್ಥೆಗಳು ಸಂಶೋಧಕರಿಗೆ ಸಂಪೂರ್ಣ ಸ್ವಾಯತ್ತತೆ ನೀಡಬೇಕು.‌ ಭಾರತದಲ್ಲಿ ಯುವ ಜನರ ಸಂಖ್ಯೆ ಅಧಿಕವಿದ್ದರೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುತ್ತಿಲ್ಲ. ಮಾನವ ಸಂಪತ್ತಿನಲ್ಲಿ ಶ್ರೀಮಂತರಿದ್ದರೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಗೆ ಬರಲು ಇಂದಿಗೂ ಹೋರಾಟ ಮಾಡುತ್ತಿದ್ದೇವೆ. ಹೆಚ್ಚು ಮೌಲ್ಯದ ತಂತ್ರಜ್ಞಾನವನ್ನು ವಿದೇಶದಿಂದ ಅಮದು ಮಾಡಿಕೊಳ್ಳುತ್ತಿದ್ದೇವೆ. ಅದು ನಮ್ಮ ಅಭಿವೃದ್ಧಿಯ ಕೊರತೆಯ ಲಕ್ಷಣ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್ ಮಾತನಾಡಿ, ಕಾಲೇಜಿನಲ್ಲಿ ವಿವಿಧ ವಿಷಯಗಳ 10 ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 100ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ನಾವೀನ್ಯತೆಯ ಹಿನ್ನಲೆಯಲ್ಲಿ ಸಂಶೋಧನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಒನ್ ಡೇಟಾ, ಒನ್ ನೇಷನ್ ಅಡಿಯಲ್ಲಿ ದೇಶದ ಪ್ರಗತಿಗಾಗಿ ಮಾಹಿತಿಯ ಏಕೀಕರಣ ಕಾರ್ಯ ಮಾಡುತ್ತಿದ್ದು, ಸಂಶೋಧಕರಿಗೆ ಮತ್ತು ಸ್ಟಾರ್ಟ್ಅಪ್ ಗಳಿಗೆ ವಿಶ್ವಾಸರ್ಹ ಮತ್ತು ನೀತಿ ಆಧಾರಿತ ಸಂಶೋಧನೆಗೆ ಸಹಾಯವಾಗಲಿದೆ ಎಂದು ಹೇಳಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಕಾರ್ಯಾಗಾರದ ಸಂಯೋಜಕ‌ ಡಾ. ಎಚ್.ಪಿ.ಸಚಿನ್, ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸುಭದ್ರ, ಡಾ. ವಿ.ವಿಕ್ರಮ್ ಉಪಸ್ಥಿತರಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಸಮುದಾಯದ ಒಗ್ಗಟ್ಟಿನಿಂದ ಆರ್ಥಿಕ ಅಭಿವೃದ್ಧಿ

digimalenadu

ಶಿವಮೊಗ್ಗ
error: Content is protected !!