ರೋಟರಿಯಿಂದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮ

ರೋಟರಿಯಿಂದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮ

ಶಿವಮೊಗ್ಗ | 13 ಅಕ್ಟೋಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಹೆಣ್ಣುಮಕ್ಕಳು ಆರ್ಥಿಕವಾಗಿ ಸಬಲವಾದರೆ ಕುಟುಂಬ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆಯ ಇಸಿ ಕಮಿಟಿ ಸದಸ್ಯೆ ಎಸ್.ವಿ.ಚಂದ್ರಕಲಾ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಭಾಂಗಣದಲ್ಲಿ ಏರ್ಪಡಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿ, ಗುಡಿ ಕೈಗಾರಿಕೆ ಹಾಗೂ ಸ್ವಂತ ಉದ್ದಿಮೆಗಳಿಂದ ಹಣದ ದುಡಿಮೆ, ಹಣದಿಂದಲೇ ಮತ್ತೆ ಹಣವನ್ನು ಗಳಿಸುವಂತೆ ಧೈರ್ಯವಾಗಿ ಮುನ್ನಡೆಯಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಕುಟುಂಬದ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತದೆ. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕೈಜೋಡಿಸಲು ಸಹಾಯಕ ವಾಗುತ್ತೆದೆ. ಗುಡಿ ಕೈಗಾರಿಕೆ ಮಹಿಳೆಯರ ಸ್ವಾವಲಂಬನೆಗೆ ನೆರವಾಗುತ್ತದೆ ಎಂದು ಹೇಳಿದರು.

ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಉದ್ಯಮ ನಡೆಸಲು ಅವಶ್ಯವಿರುವ ಅರಿವು ಶಿಬಿರಗಳನ್ನು ಆಯೋಜಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.
ಎಸ್‌ಬಿಐನ ಗಂಗಾಧರಪ್ಪ ಮಾತನಾಡಿ, ಬ್ಯಾಂಕ್ ಗಳ ಸಾಲ ಸೌಲಭ್ಯಗಳು ಎಲ್ಲಾ ಜನರಿಗೂ ತಲುಪುತಿಲ್ಲ. ಎಸ್‌ಬಿಐನಿಂದ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳಿದ್ದು, ಸಾಲ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಯಶಸ್ವಿ ಮಹಿಳೆಯರಾಗಬೇಕು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಗೋಪಾಳ ಮಹಿಳಾ ಸಹಕಾರ ಸಂಘದ ಸದಸ್ಯರು ಹಾಗೂ ರೋಟರಿ ಸದಸ್ಯರಾದ ರವಿ, ಕಮ್ಯೂನಿಟಿ ಡೈರೆಕ್ಟರ್ ಮಂಜುಳಾ ರಾಜು, ಸಿದ್ದಲಿಂಗ ಮೂರ್ತಿ, ಕಾರ್ಯದರ್ಶಿ ರಶ್ಮಿ, ನಾಗರಾಜ್ ಹಾಗೂ ರೋಟರಿ ಸದಸ್ಯರು ಭಾಗವಹಿಸಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಪ್ಲಾಸ್ಟಿಕ್ನಿಂದ ಪರಿಸರಕ್ಕೆ ತೊಂದರೆ

digimalenadu

ಶಿವಮೊಗ್ಗ
error: Content is protected !!