ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಸಲು ಕಾರ್ಯಾಗಾರ ಸಹಕಾರಿ

ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಸಲು ಕಾರ್ಯಾಗಾರ ಸಹಕಾರಿ

ಶಿವಮೊಗ್ಗ | 30 ನವೆಂಬರ್‌ 2025 | ಡಿಜಿ ಮಲೆನಾಡು.ಕಾಂ

ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಾಗಲು ತಾಂತ್ರಿಕ ಕಾರ್ಯಾಗಾರಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕ ಎಂದು ಶಿವಮೊಗ್ಗ ಬಿಎಸ್‌ಎನ್‌ಎಲ್‌ ಡಿಜಿಎಂ ಸಮಿತಾ ಸರ್ಕಾರ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನ ಇಲೆಕ್ಟ್ರಾನಿಕ್ಸ್‌ ಮತ್ತು ಟೆಲಿಕಮ್ಯೂನಿಕೇಷನ್‌ ಇಂಜಿನಿಯರಿಂಗ್‌ ವಿಭಾಗದಿಂದ ಐಇಇಇ ಎಇಎಸ್‌ಎಸ್‌ ವಿದ್ಯಾರ್ಥಿ ಘಟಕ ಮತ್ತು ಐಇಟಿಇ ಸಹಯೋಗದಲ್ಲಿ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಿಂಪೋಸಿಯಂ ಸಿಗ್ಮಾ 2025 ಕಾರ್ಯಕ್ರಮದಲ್ಲಿ ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜೆಎನ್‌ಎನ್‌ಸಿಇ ಪ್ರಾಚಾರ್ಯ ಡಾ. ವಿಜಯಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳು ಹೊಸ ಸವಾಲುಗಳನ್ನು ಸ್ವೀಕರಿಸಲು ಮತ್ತು ಯಶಸ್ವಿ ವೃತ್ತಿ ಜೀವನ ನಡೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಎನ್‌ಇಎಸ್‌ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌ ಮಾತನಾಡಿ, ತಾಂತ್ರಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಪರಿಣತಿ ಹೊಂದುವಂತೆ ಸಲಹೆ ನೀಡಿದರು. ಎಚ್‌ಒಡಿ ಡಾ. ಎಂ.ಬಿ.ಉಷಾದೇವಿ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಇದಾಗಿದೆ ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಹ್ಯಾಕಥಾನ್‌, ಮೇಜ್‌ ರನ್‌, ಟೆಕ್‌ ಟಾಕ್‌, ಲೈನ್‌ ಫಾಲೋವರ್‌ ಮತ್ತ ಆರ್ಡ್ಯೂನೋ ಕ್ಲಾಷ್‌ ತಾಂತ್ರಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ರಾಜ್ಯದ ವಿವಿಧ ಕಾಲೇಜುಗಳಿಂದ 270ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ. ಎಸ್‌.ವಿ.ಸತ್ಯನಾರಾಯಣ, ಡಾ. ಎಸ್‌.ಆರ್‌.ಅಶ್ವಿನಿ, ಡಾ. ಎಸ್‌.ಶಶಿಕಿರಣ್‌, ವಿದ್ಯಾರ್ಥಿಗಳು ಹಾಜರಿದ್ದರು. ವಿಜೇತರಿಗೆ 35 ಸಾವಿರ ರೂ. ನಗದು ಬಹುಮಾನ ಗಳಿಸಿತು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ದೇಶದ ಉನ್ನತಿಕರಣಕ್ಕೆ ಗುಣಾತ್ಮಕ ಸಂಶೋಧನೆ ಅವಶ್ಯಕ

digimalenadu

ಶಿವಮೊಗ್ಗ
error: Content is protected !!