ಮೌಲ್ಯಯುತ ಜೀವನಶೈಲಿಯಿಂದ ಉತ್ತಮ ವ್ಯಕ್ತಿತ್ವ
ಶಿವಮೊಗ್ಗ | 15 ಡಿಸೆಂಬರ್ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾನವ ಸಂಪತ್ತು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜೆಸಿಐ ವಲಯ ಪೂರ್ವಾಧ್ಯಕ್ಷ ಮಲ್ಲಿಕಾರ್ಜುನ ಕಾನೂರು ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಜೆಸಿಐ ಶಿವಮೊಗ್ಗ ವಿವೇಕ್ ಆಯೋಜಿಸಿದ್ದ ಜಡ್ಒಟಿಎಸ್ 2026 ಕಾರ್ಯಕ್ರಮದಲ್ಲಿ ಮಾತನಾಡಿ, ಜೀವನದಲ್ಲಿ ಮೌಲ್ಯಗಳನ್ನು ರೂಢಿಸಿಕೊಂಡಾಗ ಸಾರ್ಥಕ ಬದುಕನ್ನು ಕಾಣಲು ಸಾಧ್ಯ ಎಂದು ತಿಳಿಸಿದರು.
ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಪ್ರಯತ್ನ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ದೇಶದ ಭವಿಷ್ಯ ಯುವಜನರು. ಅವರ ಪಾತ್ರ ಮಹತ್ವವಾದದ್ದು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
2025ರ ಜೆಸಿಐ ವಲಯಾಧ್ಯಕ್ಷ ಗೌರೀಶ್ ಭಾರ್ಗವ್ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ನಿರ್ದೇಶಕ ಅನುಷ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ತರಬೇತುದಾರ ಜಿ.ಸೂರ್ಯನಾರಾಯಣ ವರ್ಮಾ, 2026ರ ನಿಯೋಜಿತ ವಲಯಾಧ್ಯಕ್ಷ ಮಧುಸೂದನ ನಾವಡ, ನಿಯೋಜಿತ ಉಪಾಧ್ಯಕ್ಷ ಗಣೇಶ್, ರಮೇಶ್ ಪೈ, ಜೆಸಿಐ ಶಿವಮೊಗ್ಗ ವಿವೇಕ್ ಘಟಕದ ನಿಯೋಜಿತ ಅಧ್ಯಕ್ಷೆ ಮಂಜುಳಾ ಕೇಶವ್, ಕಾರ್ಯದರ್ಶಿ ವಿಜಯಲಕ್ಷ್ಮೀಕದಂಬ, ಗಣೇಶ್ ವಿಜಯಕುಮಾರ್, ವಲಯ ಪದಾಧಿಕಾರಿಗಳು, ಜೆಸಿಐ ಶಿವಮೊಗ್ಗ ವಿವೇಕ್ ಘಟಕದ ಸದಸ್ಯರು ಇದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
