ಸರ್ಕಾರಿ ಶಾಲೆಗಳ ಸುಧಾರಣೆಗೆ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆಯಾಗಲಿ

ಸರ್ಕಾರಿ ಶಾಲೆಗಳ ಸುಧಾರಣೆಗೆ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆಯಾಗಲಿ

ಶಿವಮೊಗ್ಗ | 29 ಡಿಸೆಂಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯ ಹೆಚ್ಚಿಸುವುದು ಅವಶ್ಯ ಎಂದು ಜಿಲ್ಲಾ ಸರ್ವೋದಯ ಮಂಡಳಿ ಮಾಜಿ ಅಧ್ಯಕ್ಷ ಭಗವಂತ ರಾವ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಕರ್ನಾಟಕ ಸರ್ವೋದಯ ಮಂಡಲ ಶಿವಮೊಗ್ಗ ಜಿಲ್ಲಾ ಘಟಕ ರಾಜ್ಯಾದ್ಯಂತ ಎಲ್ಲ ಶಾಲಾ ಕಾಲೇಜುಗಳು ಹಾಗೂ ಸಮುದಾಯ ಸಂಸ್ಥೆಗಳಲ್ಲಿ ಹಮ್ಮಿಕೊಳ್ಳುತ್ತಿರುವ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ ಭಾಷಣ ಸ್ಪರ್ಧೆ ಕಾರ್ಯಕ್ರಮದ ಅಂಗವಾಗಿ ಮಾಚೇನಹಳ್ಳಿಯ ತುಂಗಾಭದ್ರಾ ಪ್ರೌಢಶಾಲೆ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಖಾಸಗಿ ಕಂಪನಿಗಳು ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನಿಧಿಯನ್ನು ಸರ್ಕಾರಿಗಳ ಶಾಲೆಗಳ ಸುಧಾರಣೆಗೆ ಬಳಸುವ ಅಗತ್ಯವಿದೆ ಎಂದು ತಿಳಿಸಿದರು.

ಎಲ್ಲಾ ವೃತ್ತಿಗಳು ಸಮಾನ ಮೌಲ್ಯ ಹೊಂದಿವೆ. ಶ್ರಮದಾಯಕ ಜೀವನವು ಬದುಕಲು ಯೋಗ್ಯವಾದ ಜೀವನವಾಗಿದೆ. ಸರ್ಕಾರದ ಪ್ರಗತಿಯ ಪ್ರಯೋಜನಗಳು ಸಮಾಜದ ಬಡಜನರಿಗೆ ತಲುಪಬೇಕು. ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿ ಸಮಾಜವನ್ನು ಸುಧಾರಿಸಲು ಮತ್ತು ಕಂಪನಿಗಳಿಗೆ ಸಕಾರಾತ್ಮಕ ಇಮೇಜ್ ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಸೋಮಶೇಖರ್, ಸರ್ವೋದಯ ಮಂಡಳಿ ಉದ್ಡೇಶ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಅಹಿಂಸೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಕಲ್ಯಾಣ ಸಾಧಿಸುವುದು. ಗಾಂಧಿ ಆದರ್ಶಗಳು ಮರೆಯಾಗುತ್ತಿರುವ ಆಗುತ್ತಿರುವ ಈ ಸದಂರ್ಭದಲ್ಲಿ ಮಕ್ಕಳಲ್ಲಿ ಗಾಂಧೀಜಿ ಅವರ ಸರ್ವೋದಯ ತತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಉಪಯುಕ್ತ ಎಂದರು.

ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಮಹಾತ್ಮ ಗಾಂಧಿ ಅವರ ಸತ್ಯ, ಶಾಂತಿ ಮತ್ತು ಸರಳತೆ, ಅಹಿಂಸೆ, ಸ್ವರಾಜ್ಯ ಮತ್ತು ಸ್ವದೇಶಿ ಬೋಧನೆಗಳ ಮೂಲಕ ಬದುಕಲು ಶಾಲಾ ಮಕ್ಕಳನ್ನು ಪ್ರೇರೇಪಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಶಾಲೆಗೆ ಕುರ್ಚಿ ಮಕ್ಕಳಿಗೆ, ಪುಸ್ತಕ, ಲೇಖನ ಸಾಮಗ್ರಿ ವಿತರಿಸಲಾಯಿತು. ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಆರ್.ಮನೋಹರ್, ಖಜಾಂಚಿ ರುದ್ರಪ್ಪ, ಸದಸ್ಯರುಗಳು, ತುಂಗಾಭದ್ರಾ ಪ್ರೌಢಶಾಲಾ ಮುಖ್ಯಶಿಕ್ಷಕ ಸಿದ್ದೇಶ್ವರಪ್ಪ, ಸಂತೋಷ್ ಕುಮಾರ್, ಶಿಕ್ಷಕರು ಉಪಸ್ಥಿತರಿದ್ದರು. ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಆತ್ಮವಿಶ್ವಾಸ ವೃದ್ಧಿಸುವ ಇನ್ನರ್ ವ್ಹೀಲ್ ಸಂಸ್ಥೆ

digimalenadu

ಶಿವಮೊಗ್ಗ
error: Content is protected !!