ಶಿವಮೊಗ್ಗ ಜಿಲ್ಲಾ ವಿತರಕರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ

ಶಿವಮೊಗ್ಗ | 29 ಡಿಸೆಂಬರ್‌ 2025 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವಿತರಕರ ಸಂಘ ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಅಶ್ವತ್ಥ್ ನಾರಾಯಣ ಶೆಟ್ಟಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಯೋಜಿತ ಸಂಘಗಳಲ್ಲಿ ಸಕ್ರಿಯ ಸಂಘವಾಗಿದೆ. ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ದೇವರಾಜ ಎಂ.ಸಿ ಮಾತನಾಡಿ, ಆರು ವರ್ಷದಿಂದ ಕ್ಯಾಲೆಂಡರ್‌ಗಳನ್ನು 1,260 ವಿತರಕರಿಗೆ ನೀಡುತ್ತಿದ್ದ, ಸಂಘಕ್ಕೆ ಯಾವುದೇ ರೀತಿ ಆರ್ಥಿಕ ಹೊರೆಯಾಗದಂತೆ ಸದಸ್ಯ ವಿತರಕರುಗಳಲ್ಲಿಯೇ ಪ್ರಾಯೋಜಕತ್ವ ಪಡೆದು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ನಮ್ಮ ಸಂಘವು ಹಿಂದೆ ನಡೆದ ಹಲವಾರು ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡಿದ್ದು, ಮುಂಬರುವ ದಿನಗಳಲ್ಲಿ ಅಗತ್ಯ ಸಹಕಾರ ನೀಡಲಾಗುವುದು. 2026ರ ಫೆಬ್ರವರಿ 2ರಂದು ನಡೆಯುವ ವಿತರಕರ ದಿನಾಚರಣೆಗೆ ವಿಶೇಷ ಉಡುಗೊರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಸುರೇಶ್, ಖಜಾಂಚಿ ಮನೋಹರ್, ವಿತರಕರ ಸಂಘದ ಗೌರವ ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷ ಬದ್ರಿನಾಥ್, ಕಾರ್ಯದರ್ಶಿ ಗಿರೀಶ್ ಒಡೆಯರ್, ಮಹಮದ್ ಇಕ್ಬಾಲ್, ಸುರೇಂದ್ರನಾಥ್, ಸಂಘದ ಪದಾಧಿಕಾರಿಗಳಾದ ಚಂದ್ರಶೇಖರ್, ವೆಂಕಟೇಶ್, ಕುಮಾರ್, ಮೋಹನ್ ಕುಮಾರ್, ಮಹಾರುದ್ರಪ್ಪ, ಸಂಘದ ಸದಸ್ಯರು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಕೃಷಿ ಪ್ರವಾಸೋದ್ಯಮಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶ

digimalenadu

ಶಿವಮೊಗ್ಗ
error: Content is protected !!