ಶಿವಮೊಗ್ಗ ಜಿಲ್ಲಾಧಿಕಾರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಅಭಿನಂದನೆ
ಶಿವಮೊಗ್ಗ | 9 ಜನವರಿ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನೂತನ ಜಿಲ್ಲಾಧಿಕಾರಿ ಪ್ರಭುಲಿಂಗಪ್ಪ ಕವಳಿಕಟ್ಟಿ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಅಭಿನಂದಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭುಲಿಂಗಪ್ಪ ಕವಳಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅವರು ಜಿಲ್ಲಾಧಿಕಾರಿ ಪ್ರಭುಲಿಂಗಪ್ಪ ಅವರನ್ನು ಅಭಿನಂದಿಸಿದರು.
ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಮತ್ತು ವಾಣಿಜ್ಯ ಅಭಿವೃದ್ಧಿಗೆ ಸಂಘವು ಜಿಲ್ಲಾಧಿಕಾರಿ ಜತೆ ಕೈಜೋಡಿಸುತ್ತದೆ ಎಂದು ಬಿ.ಗೋಪಿನಾಥ್ ತಿಳಿಸಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕ ಕೆ.ಬಿ.ಶಿವಕುಮಾರ್, ಗಣೇಶ ಎಂ.ಅಂಗಡಿ, ರಾಜಶೇಖರ್, ಲಕ್ಷ್ಮೀದೇವಿ ಗೋಪಿನಾಥ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಹಾಜರಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
