ಶಿವಮೊಗ್ಗದಲ್ಲಿ ಜನವರಿ 24 ರಿಂದ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಫಲ ಪುಷ್ಪ ಪ್ರದರ್ಶನ

ಶಿವಮೊಗ್ಗದಲ್ಲಿ ಜನವರಿ 24 ರಿಂದ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ, ಫಲ ಪುಷ್ಪ ಪ್ರದರ್ಶನ

Shivamogga ಶಿವಮೊಗ್ಗ | 22 ಜನವರಿ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ 63 ನೇ ಫಲ ಪುಷ್ಪ ಪ್ರದರ್ಶನವನ್ನು ಜನವರಿ 24 ರಿಂದ 27 ರವರೆಗೆ ನಾಲ್ಕು ದಿನ ಶಿವಮೊಗ್ಗದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್‌.ಹೇಮಂತ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಲೆನಾಡು ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಆಶ್ರಯದಲ್ಲಿ ನಾಲ್ಕು ದಿನ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ಜನವರಿ 24ರ ಬೆಳಗ್ಗೆ 11ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.

ವಿಶೇಷತೆಗಳು : 2 ಲಕ್ಷ ಸಂಖ್ಯೆಯ ವಿವಿಧ ಬಣ್ಣದ ಹೂವುಗಳಾದ ಗುಲಾಬಿ, ಸೇವಂತಿಗೆ, ಆಂಥೋರಿಯಂ ಗಿಡಗಳನ್ನು ಬಳಸಿ ವಿಶೇಷ ಹೂವಿನ ಕಲಾಕೃತಿ ರಚಿಸಲಾಗುತ್ತದೆ. ವಿವಿಧ ಜಾತಿಯ ಹೂವುಗಳಿಂದ 16 ಅಡಿ ಎತ್ತರದ ಕೋಟೆ ಹಾಗೂ ಕೆಳದಿ ಶಿವಪ್ಪ ನಾಯಕನ ಪ್ರತಿಮೆ ರಚನೆ, 15 ಅಡಿ ಎತ್ತರದ ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ ರಚನೆ. ಹೂವುಗಳು ಹಾಗೂ ಫೋಲಿಯೇಜ್‌ನಿಂದ 60 ಅಡಿ ಅಗಲ * 22 ಅಡಿ ಎತ್ತರದ ಜೋಗ ಜಲಪಾತದ ಕಲಾಕೃತಿಗಳು ಈ ಬಾರಿಯ ಆಕರ್ಷಣೆಗಳಾಗಿವೆ. ಹೂವಿನ ಐ ಲವ್ ಶಿವಮೊಗ್ಗ ಸೆಲ್ಫಿ ಪಾಯಿಂಟ್, ಕುಜ್ಬ ಗಿಡಗಳು (ಬೋನ್ಸಾಯ್) ಗಿಡಗಳ ಪ್ರದರ್ಶನ ಇರುತ್ತದೆ.

ಮಾರಾಟ ಮೇಳ: ಕ್ರಾಫ್ಟ್ಸ್‌ ಆಫ್‌ ಮಲ್ನಾಡ್ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಸ್ವ ಸಹಾಯ ಗುಂಪಿನ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾಂಡಿಗ್ ಮಾಡಿದ್ದು, ಈಗಾಗಲೇ ಈ ಬ್ರಾಂಡ್ ಅಡಿಯಲ್ಲಿ ಮಹಿಳೆಯರು ತಯಾರಿಸಿದ ದೀಪಗಳು ಮತ್ತಿತರೆ ಉತ್ಪನ್ನಗಳ ಉತ್ತಮ ಮಾರಾಟವಾಗಿದೆ. ಇದೀಗ ವಿಶೇಷವಾಗಿ ಇ-ಕಾಮರ್ಸ್ ವೆಬ್‌ಸೈಟ್ ರಚನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ತಯಾರಿ ಮಾಡಿಕೊಳ್ಳಲಾಗಿದ್ದು ಮೇಳದ ಉದ್ಘಾಟನೆಯಂದು ಸಚಿವರು ವೆಬ್‌ಸೈಟ್‌ಗೆ ಚಾಲನೆ ನೀಡುವರು.

ಮೇಳದ ವೈಶಿಷ್ಟ್ಯಗಳು : ಮೇಳದ ಮಳಿಗೆಗಳಲ್ಲಿ ರಾಜ್ಯ, ಹೊರ ರಾಜ್ಯ ಮತ್ತು ವಿವಿಧ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಸ್ವ ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಮಣ್ಣಿನ ಅಲಂಕಾರಿಕ ಉತ್ಪನ್ನಗಳು, ಮ್ಯಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಭತ್ತದ ತೋರಣ, ಈಚಲು ಚಾಪೆ, ಮಣ್ಣಿನ ಆಭರಣಗಳು, ಮರದ ಕೆತ್ತನೆಗಳು, ಖೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಫೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೆದರ್ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು, ಬೀದರ್ ಜಿಲ್ಲೆಯ ಬಿದರಿ ಉತ್ಪನ್ನಗಳು ಹಾಗೂ ಅಕ್ಕ ಕೆಫೆಯ ಸದಸ್ಯರು, ಇತರೆ ಸ್ವ ಸಹಾಯ ಗುಂಪಿನ ಸದಸ್ಯರಿಂದ ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುತ್ತವೆ.

ಸಿರಿಧಾನ್ಯ ಮೇಳ: ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಅಂತರಾಷ್ಟ್ರೀಯ ವಾಣಿಜ್ಯ ಮೇಳ 2026 ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳವನ್ನು ಈ ಮೇಳದಲ್ಲಿಯೇ ಹಮ್ಮಿಕೊಳ್ಳಲಾಗಿದ್ದು, ಸಿರಿಧಾನ್ಯ ಕುರಿತಾದ ಪ್ರತ್ಯೇಕ ಮಳಿಗೆಯನ್ನು ಸ್ಥಾಪಿಸಲಾಗುವುದು.

ಕೈ ಮಗ್ಗ ಜವಳಿ ಮೇಳ : ಜವಳಿ ಮತ್ತು ಕೈಮಗ್ಗ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ 11 ರಾಜ್ಯಗಳು 19ಜಿಐ ಟ್ಯಾಗ್ ಹೊಂದಿರುವ ವಿವಿಧ ರೀತಿಯ ಸೀರೆಗಳು, ಹ್ಯಾಂಡ್‌ಲೂಂ ಸೀರೆಗಳು, ಶಾಲುಗಳು, ಬೆಡ್ ಶೀಟ್‌ಗಳು ಮತ್ತು ಕೆಎಸ್‌ಐಸಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ.

ವಿವಿಧ ಸ್ಪರ್ಧೆಗಳು : ರೈತರಿಗಾಗಿ  ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತರು ಬೆಳೆದ ವಿಶಿಷ್ಟ, ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಜನವರಿ 26 ರ ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.

ಹೂ ರಂಗೋಲಿ ಸ್ಪರ್ಧೆ: ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಿದ್ದು, ಹೂ, ಹಣ್ಣು, ತರಕಾರಿ, ಬೇಳೆಕಾಳುಗಳ ಹಾಗೂ ದವಸ ಧಾನ್ಯಗಳನ್ನು ಬಳಸಿ ರಂಗೋಲಿ ರಚನೆ ಮಾಡಬೇಕು. ಸಮಾರೋಪ ಸಮಾರಂಭದಲ್ಲಿ ಫಲ ಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದಿಸಲಾಗುವುದು ಎಂದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಜಿಪಂ ಯೋಜನಾ ನಿರ್ದೇಶಕಿ ನಂದಿನಿ, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ವೈ ಆರ್ ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಚಂದ್ರಕಾಂತ ಹಸಗೋಡು ಸುದ್ದಿಗೋಷ್ಠಿಯಲ್ಲಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

digimalenadu

ಶಿವಮೊಗ್ಗ
error: Content is protected !!