ಸಂಚಾರಿ ಪೊಲೀಸರಾಗಿ ಕಾರ್ಯ ನಿರ್ವಹಿಸಿದ ವಿದ್ಯಾರ್ಥಿಗಳು, ಎನ್ ಇ ಎಸ್ ಶಿವಮೊಗ್ಗ
ಶಿವಮೊಗ್ಗ | 28 ಜನವರಿ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಎನ್ಇಎಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಕಾರ್ಯ ನಿರ್ವಹಿಸಿದರು. ವಿವಿಧ ವೃತ್ತಗಳಿಗೆ ತೆರಳಿ ಸಂಚಾರಿ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಶ್ರಮಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಕಮಲಾ ನೆಹರು ಮಹಿಳಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಅಂಗವಾಗಿ ಸರಣಿ ಕಾನೂನು ಅರಿವು ಕಾರ್ಯಕ್ರಮ ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು.
ಎಟಿಎನ್ಸಿಸಿ ಹಾಗೂ ಕಮಲಾ ನೆಹರು ಕಾಲೇಜಿನ ಎನ್ಸಿಸಿ, ರೇಂಜರ್ಸ್ ರೋವರ್ಸ್ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ವೃತ್ತ ಮಧ್ಯೆ ನಿಂತು ಕೈ ಸಂಕೇತಗಳನ್ನು ತೋರಿಸುತ್ತ ಸಂಚಾರ ದಟ್ಟಣೆ ನಿಯಂತ್ರಿಸಿದರು. ವಾಹನ ಸವಾರರಲ್ಲಿ ಜಾಗೃತಿ ಮೂಡಿಸಿದರು. ವೃತ್ತದಲ್ಲಿ ಜೀಬ್ರಾ ಲೈನ್ ದಾಟಿದ ಸವಾರರಿಗೆ, ವೃತ್ತದಲ್ಲಿ ಸರಿಯಾಗಿ ನಿಲ್ಲುವ ಬಗೆ ವಿವರಿಸುತ್ತ, ಅವಸರವೇ ಅಪಘಾತಕ್ಕೆ ಕಾರಣ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಮಾತನಾಡಿ, 8ನೇ ತರಗತಿಯಲ್ಲಿ ಸ್ಕೌಟ್ಸ್ ಮೂಲಕ ಸಂಚಾರಿ ಪೊಲೀಸರೊಂದಿಗೆ ಕೆಲ ಸಮಯ ಕಾರ್ಯನಿರ್ವಹಿಸುವ ಅವಕಾಶ ದೊರಕಿತ್ತು. ಅದು ಸಂಚಾರಿ ನಿಯಮದ ಬಗ್ಗೆ ನಮ್ಮೊಳಗೆ ಅದ್ಭುತವಾದ ಜಾಗೃತಿ ಮೂಡಿಸಿತ್ತು. ಅಂತಹ ಸಂದರ್ಭವನ್ನು, ಇಂದಿನ ವಿದ್ಯಾರ್ಥಿಗಳ ಮೂಲಕ ಪುನರ್ ಪ್ರಯೋಗ ಮಾಡುವ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಸಾವಿರ ಅಪಘಾತ ಆಗುತ್ತಿವೆ. ಬಲಿಯಾದವರಲ್ಲಿ ಯುವ ಸಮೂಹದ ಸಂಖ್ಯೆಯೆ ಹೆಚ್ಚು. ಜಾಗೃತವಾದ ನಡೆ ನಿಮ್ಮದಾಗಲಿ. ಅಪಘಾತವಾದ ಕೂಡಲೇ ಗಾಯಳುವನ್ನು ಆಸ್ಪತ್ರೆಗೆ ಸೇರಿಸಿ. ಕೂಡಲೇ ಪೊಲೀಸ್ ಇಲಾಖೆಗೆ ವಿಷಯ ತಿಳಿಸಿ. ಆಸ್ಪತ್ರೆಗೆ ಗಾಯಾಳುವನ್ನು ಸೇರಿಸಿದ ವ್ಯಕ್ತಿಗೆ, ವೈದ್ಯರು ನೀಡುವ ಪ್ರಮಾಣ ಪತ್ರವನ್ನು ಪಡೆದು, ಜೋಪಾನ ಮಾಡಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸಂಚಾರಿ ಪೊಲೀಸರು ಬಿಸಿಲು ಮಳೆ ಲೆಕ್ಕಿಸದೆ ಜನರನ್ನು ಸುರಕ್ಷಿತವಾಗಿಡುವ ಕಾರ್ಯ ನಡೆಸುತ್ತಿದ್ದಾರೆ. ಕಾನೂನು ಉಲ್ಲಂಘನೆ ಎಂಬುದು ಯುವ ಸಮೂಹದಲ್ಲಿ, ಒಂದು ರೀತಿಯ ಆಕರ್ಷಣೆ ಮನೋಭಾವವಾಗಿ ಕಾಡುತ್ತಿದೆ. ರಸ್ತೆ ಸುರಕ್ಷತಾ ಕಾನೂನುಗಳನ್ನು ಅನುಸರಿಸುವುದು ಮೂಲಕರ್ತವ್ಯವಾಗಬೇಕು. ಆಗ ಮಾತ್ರ ಬದುಕಿನಲ್ಲಿ ಬದಲಾವಣೆ ಸಾಧ್ಯ ಎಂದು ಹೇಳಿದರು.
ಸಂಚಾರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದೇವರಾಜ್ ಮಾತನಾಡಿ, ಶಿವಮೊಗ್ಗ ನಗರದಲ್ಲಿಯೇ 3 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ವಾಹನಗಳಿವೆ. ಇಂಟಲಿಜೆನ್ಸ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಸಹಾಯದಿಂದ, ನಮ್ಮ ಕಂಟ್ರೋಲ್ ರೂಂ ಮೂಲಕವೇ ನಗರದಲ್ಲಿ ನಡೆಯುವ ಪ್ರತಿಯೊಂದು ಸಂಚಾರಿ ಕಾನೂನು ಉಲ್ಲಂಘನೆಗಳ ಮೇಲೆ ತೀವ್ರ ನಿಗಾ ಇಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಐದು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾದಲ್ಲಿ, ಡಿಎಲ್ ರದ್ದು ಪಡಿಸುವಂತಹ ಕಾನೂನು ಅನುಷ್ಟಾನಗೊಳ್ಳಲಿದೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಸಂಪನ್ಮೂಲ ವ್ಯಕ್ತಿಯಾಗಿ ವಕೀಲೆ ಸಾದ್ವಿ ಕಾಮತ್ ಮಾತನಾಡಿದರು. ಎ.ಟಿ.ಎನ್.ಸಿ ಕಾಲೇಜಿನ ವಿಶೇಷ ಕರ್ತವ್ಯಾಧಿಕಾರಿ ಡಾ. ಆರ್.ಎಂ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿ.ಎಚ್.ಮುನೇಶಪ್ಪ ಸಂಚಾರ ನಿಯಂತ್ರಣಕ್ಕಾಗಿ ಪೋಲಿಸರು ಬಳಸುವ ವಿವಿಧ ಕೈ ಸಂಕೇತಗಳ ಪ್ರಾತ್ಯಕ್ಷಿಕೆ ನೀಡಿದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
