ಬದುಕಿನ ಮೌಲ್ಯಗಳನ್ನು ಕಲಿಸುವ ಸಂಸ್ಥೆ ಜೆಸಿಐ
ಶಿವಮೊಗ್ಗ | 31 ಜನವರಿ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ನಾಯಕತ್ವ ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ತರಬೇತಿ ಮಹತ್ತರ ಪಾತ್ರ ವಹಿಸುತ್ತದೆ ನುರಿತ ವಲಯ ತರಬೇತುದಾರ ಪ್ರವೀಣ್ ದೇಶಪಾಂಡೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಜಿಲ್ಲಾ ಪಂಚಾಯಿತಿ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಹಯೋಗದೊಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಬದುಕಿನ ಮೌಲ್ಯಗಳನ್ನು, ಸಂಸ್ಕಾರಗಳನ್ನು ಹಾಗೂ ಶಿಸ್ತುಬದ್ಧ ಜೀವನ ಮತ್ತು ಕೌಶಲ್ಯಗಳನ್ನು ಜೆಸಿಐ ಕಲಿಸುತ್ತದೆ. ಜೆಸಿಐ ಸಂಸ್ಥೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಂಡು ಮುನ್ನಡೆಯಬೇಕು. ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಹಂತ ಹಂತವಾಗಿ ಪ್ರಗತಿ ಸಾಧಿಸಬೇಕು. ಸಮಾಜಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು. ಜೆಸಿಐ ಸಂಸ್ಥೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಬಿ.ಎನ್.ಸಂತೋಷ್ ಕುಮಾರ್ ಮಾತನಾಡಿ, ತರಬೇತಿಗಳಿಂದ ವಿದ್ಯಾರ್ಥಿಗಳಲ್ಲಿ ವಿಶೇಷ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಮುಂದಿನ ಕಾರ್ಯಕ್ಷೇತ್ರ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯ ಮೂಲಕ ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯ ನಡೆಸುವ ಜತೆಯಲ್ಲಿ ಯುವಜನರಿಗೆ ತರಬೇತಿ ನೀಡಲಾಗುತ್ತಿದೆ. ಇದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ತರಬೇತಿಗಳು ನೆರವಾಗುತ್ತದೆ ಎಂದು ಹೇಳಿದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ವಲಯ ತರಬೇತುದಾರ ಗಣೇಶ್ ವಿ, ಶೇಷಗಿರಿ ಡಿ, ಕಾರ್ಯದರ್ಶಿ ಉಮಾಮಣಿ, ಮಹದೇವಸ್ವಾಮಿ, ಡಾ. ಕೃಪಾಲಿನಿ, ಸಿಂಚನಾ, ಗೌರಿಶಂಕರ, ರವಿ ಮತ್ತು ಜೆಸಿಐ ಸಂಸ್ಥೆ ಸದಸ್ಯರು ಹಾಜರಿದ್ದರು.
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
