ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ Shivamogga

ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ Shivamogga

ಶಿವಮೊಗ್ಗ | 2 ಮಾರ್ಚ್‌ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ರಾಜ್ಯದಲ್ಲಿ 2ನೇ ಹಂತದ ನಗರಗಳಲ್ಲಿನ  ಕೈಗಾರಿಕಾ ವಸಹಾತು ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ  ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕೆಲಸ ಸರ್ಕಾರದ ಮಟ್ಟದಿಂದ  ಆಗಬೇಕಿದೆ ಎಂದು ( Bangalore ) ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆ 2025 ರ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರ ಎಂ ಎಸ್ ಎಂ ಇ ( MSME ) ಗಳಿಗೆ  ಇನ್ನು ಹೆಚ್ಚಿನ ಪ್ರಾಮುಖ್ಯತೆ ನೀಡಿ ಪ್ರೋತ್ಸಾಹಿಸಬೇಕಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶ ಇದೆ ಎಂದು ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಏಪ್ರಿಲ್ 24ರಿಂದ 26ರವರೆಗೆ ಎಫ್‌ಕೆಸಿಸಿಐ ( FKCCI ) ವತಿಯಿಂದ ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್ ಹಮ್ಮಿಕೊಳ್ಳಲಾಗುವುದು. ಕೃಷಿ ಮತ್ತು ಆಹಾರ ( FOOD ) ಕ್ಷೇತ್ರ ಉತ್ತೇಜಿಸಲು ಕಾರ್ಯಕ್ರಮ ಆಯೋಜಿಸಲಾಗುವುದು. ಮೇ 29ರಿಂದ 31ರವರೆಗೆ ಗ್ಲೋಬಲ್ ಎಂಎಸ್ಎಂಇ ಕಾನ್ಕ್ಲೇವ್ ಆಯೋಜಿಸಲಾಗುತ್ತಿದೆ. 400ಕ್ಕೂ ಹೆಚ್ಚು ಪ್ರದರ್ಶನ ಮಳಿಗೆಗಳನ್ನು ಏರ್ಪಡಿಸಲಾಗುತ್ತದೆ ಎಂದರು.

ಶಿವಮೊಗ್ಗ ( SHIVAMOGGA ) ಜಿಲ್ಲಾ  ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ವಾಣಿಜ್ಯ ಮತ್ತು ಕೈಗಾರಿಕಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಸರ್ಕಾರದ ಮಟ್ಟದಲ್ಲಿ ಕೊಂಡಿಯಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಸಂಘದ ಮಾಜಿ ಅಧ್ಯಕ್ಷರಾದ ಎಂ.ಶಂಕರರಾವ್, ಎಸ್.ರುದ್ರೇಗೌಡ, ಕೆ.ವಿ.ವಸಂತ್ಕುಮಾರ್, ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್ ಹಾಗೂ ಎನ್.ಗೋಪಿನಾಥ್ ಅವರಿಗೆ ಗೌರವಿಸಲಾಯಿತು.
ನ್ಯೂ ಕಿಶನ್ ಹ್ಯಾಂಡಿಕ್ರಾಫ್ಟ್, ಲಕ್ಷ್ಮೀ ಮೆಡಿಕಲ್ಸ್ ಹಾಗೂ ರವಿ ಟ್ರೇಡರ್ಸ್ ಸಂಸ್ಥೆಗಳಿಗೆ 2025ನೇ ಸಾಲಿನ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ನೀಡಲಾಯಿತು. ಬಿ.ಆರ್.ಸಂತೋಷ್, ಎಸ್.ಪಿ.ಮಧುಕರ್ ಶೆಟ್ಟಿ, ಎ.ಜಿ.ಪ್ರಕಾಶ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ತೆರಿಗೆ ಸಲಹೆಗಾರ ಯು.ಮಧುಸೂದನ್ ಐತಾಳ್ ಅವರಿಗೆ ವಿಶೇಷ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ( BUSINESS ) ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಸಂಘದ ನಿರ್ದೇಶಕರು, ಸಂಯೋಜಿತ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಹಾಜರಿದ್ದರು.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಜೆ ಎನ್ ಎನ್ ಸಿ ಇ ಐಡಿಯಾ ಲ್ಯಾಬ್ ಲೋಕಾರ್ಪಣೆ

digimalenadu

ಶಿವಮೊಗ್ಗ
error: Content is protected !!