ನಿಮ್ಮ ವಾಹನದ ಮೇಲೆ ಎಷ್ಟು ದಂಡ ಇದೆ ಚೆಕ್‌ ಮಾಡಿಕೊಳ್ಳಿ . . . ಇನ್ಮುಂದೆ ಪೊಲೀಸರು ಕಂಡಂತೆ . . . Fine

ನಿಮ್ಮ ವಾಹನದ ಮೇಲೆ ಎಷ್ಟು ದಂಡ ಇದೆ ಚೆಕ್‌ ಮಾಡಿಕೊಳ್ಳಿ . . . ಇನ್ಮುಂದೆ ಪೊಲೀಸರು ಕಂಡಂತೆ . . . Fine

ಶಿವಮೊಗ್ಗ | 31 ಮಾರ್ಚ್‌ 2026 | ಡಿಜಿ ಮಲೆನಾಡು.ಕಾಂ

ಟ್ರಾಫಿಕ್‌ ನಿಯಮ ಉಲ್ಲಂಘನೆಗಳ ವಿರುದ್ಧ ಇ ಚಲನ್‌ ವ್ಯವಸ್ಥೆಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಇನ್ಮುಂದೆ ಪೊಲೀಸರು ಕಂಡಂತೆ… Shivamogga ಶಿವಮೊಗ್ಗ ಜಿಲ್ಲಾ ಪೊಲೀಸ್ POLICE ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಇಂಟಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ( Intelligent Traffic Management System  ITMS ) ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆಗಳ ವಿರುದ್ಧ ಇ-ಚಲನ್ Challan ವ್ಯವಸ್ಥೆ ಜಾರಿಗೊಳಿಸಲಾಗಿದೆ.

2026ನೇ ಸಾಲಿನ ಏಪ್ರಿಲ್ April ತಿಂಗಳಿನಿಂದ ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕಣ್ಣಿಗೆ ಕಾಣುವ ಸಂಚಾರ ನಿಯಮ Traffic Rules ಉಲ್ಲಂಘನೆ ಮಾಡುವ ವಾಹನ ಸವಾರರನ್ನು ಸ್ಥಳದಲ್ಲಿಯೇ ತಡೆದು ದಂಡ ವಿಧಿಸಲಾಗುವುದು. ಇದರ ಜೊತೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ಪೋಟೊಗಳನ್ನು  ಜಿಪಿಎಸ್ ಆಧಾರಿತ ಕ್ಯಾಮರಾ ಮೂಲಕ ಸೆರೆ ಹಿಡಿದು, ಐಟಿಎಂಎಸ್ (ITMS) ತಂತ್ರಾಂಶದ ಮೂಲಕ ಇನ್ನಷ್ಟು ಕಟ್ಟುನಿಟ್ಟಾಗಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುವುದು.

ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ತಮ್ಮ ಹಾಗೂ ಇತರರ ಸುರಕ್ಷತೆ ಕಾಪಾಡುವಂತೆ  ಸೂಚಿಸಲಾಗಿದೆ. ತಮ್ಮ ವಾಹನಗಳ ಮೇಲೆ ಬಾಕಿ ಇರುವ ಇ-ಚಲನ್ Fine ದಂಡಗಳನ್ನು ಕೆಳಗಿನ ವಿಧಾನಗಳ ಮೂಲಕ ಪಾವತಿಸಬಹುದಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಸಬಹುದಾಗಿದೆ. ಕರ್ತವ್ಯ ನಿರತ ಶಿವಮೊಗ್ಗ ಮತ್ತು ಭದ್ರಾವತಿ ಸಂಚಾರ ಠಾಣೆಯ ಇ-ಚಲನ್ ಪಿಡಿಎ ಮೆಶಿನ್‌ ಹೊಂದಿರುವ ಎಎಸ್ಐ  ಹಾಗೂ  ಮೇಲ್ಪಟ್ಟ  ಪೊಲೀಸ್ ಅಧಿಕಾರಿಗಳ ಬಳಿ ದಂಡವನ್ನು ಪಾವತಿಸಬಹುದಾಗಿದೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಸಾರ್ವಜನಿಕರು ತಮ್ಮ ವಾಹನಗಳ ಮೇಲೆ ಇರುವ ಇ-ಚಲನ್‌ಗಳನ್ನು ಆನ್‌ಲೈನ್‌ online  ಲಿಂಕ್ https://echallan.parivahan.gov.in/index/accused-challan ಮೂಲಕ ದಂಡದ ವಿವರಗಳನ್ನು ವೀಕ್ಷಿಸಲು ಮತ್ತು ದಂಡ ಪಾವತಿಸಲು ಅವಕಾಶವಿರುತ್ತದೆ.

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಜೆಎನ್ಎನ್ ಕಾಲೇಜಿನ ಎಂಬಿಎ ವಿಭಾಗದಿಂದ ಉದ್ಯೋಗ ಮೇಳ, 80 ವಿದ್ಯಾರ್ಥಿಗಳಿಗೆ ಉದ್ಯೋಗ

digimalenadu

ಶಿವಮೊಗ್ಗ
error: Content is protected !!