ಬದುಕಿನ ಉನ್ನತಿಗೆ ಮೌಲ್ಯಗಳ ಪಾಲನೆ ಮುಖ್ಯ

ಬದುಕಿನ ಉನ್ನತಿಗೆ ಮೌಲ್ಯಗಳ ಪಾಲನೆ ಮುಖ್ಯ

ಶಿವಮೊಗ್ಗ | 21 ಏಪ್ರಿಲ್‌ 2026 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ: ವಿದ್ಯಾರ್ಥಿಗಳು ಪದವಿ ನಂತರ ವಾಸ್ತವ ಅಂಶಗಳನ್ನು ಅರಿತು ಜೀವನದಲ್ಲಿ ಮುನ್ನಡೆಯಬೇಕು ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಉಜ್ವಲ್‌.ಯು.ಜೆ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನಗರದ ಜೆಎನ್‌ಎನ್‌ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಎಂಬಿಎ, ಎಂಸಿಎ, ಎಂಟೆಕ್ ಸ್ನಾತಕೋತ್ತರ ಪದವಿಧರರ ‘ಗ್ರ್ಯಾಜುಯೇಷನ್ ಡೇ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಅನುಸರಿಸುವ ಮೌಲ್ಯಗಳು ಮತ್ತು ಸೌಜನ್ಯತೆ ಬದುಕಿನ ಉನ್ನತಿಗೆ ಮುಖ್ಯ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ  ಅನುಷ್ಠಾನದೊಂದಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉನ್ನತ ಶಿಕ್ಷಣದಲ್ಲಿ ಪರಿವರ್ತನಾತ್ಮಕ ಹಂತ ಆರಂಭಿಸಿದೆ. ಪ್ರಮುಖವಾಗಿ ಕೌಶಲ್ಯ ಆಧಾರಿತ ಮತ್ತು ಸಮಗ್ರ  ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಿದೆ. ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಸಾಮರ್ಥ್ಯಗಳು ಮತ್ತು ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಹೆಚ್ಚಿಸುವತ್ತ ಕೇಂದ್ರಿಕರಿಸಲಾಗಿದೆ ಎಂದರು.

ಎನ್ಇಎಸ್ ಚಿನ್ನದ ಪದಕ ಪ್ರದಾನ: ವಿಟಿಯು ವ್ಯಾಪ್ತಿಯ ಎಂಬಿಎ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ.ಜೆ.ಸಾಲೇರ ಅವರಿಗೆ ಎನ್ಇಎಸ್ ಸಂಸ್ಥೆಯ ಅಮೃತ ಮಹೋತ್ಸವದ ಸ್ಮರಣಾರ್ಥವಾಗಿ ಕೊಡಮಾಡುವ, ಎನ್ಇಎಸ್ ಚಿನ್ನದ ಪದಕ ನೀಡಿ ಅಭಿನಂದಿಸಲಾಯಿತು. ಇದೇ ವೇಳೆ ಎಂಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್ ಪಡೆದ ಸಂಜಯ್.ಎಂ.ವಿ ಅವರನ್ನು ಸನ್ಮಾನಿಸಲಾಯಿತು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಸಮಾಜಮುಖಿ ಕಾರ್ಯಗಳಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ, ಕೌಶಲ್ಯಪೂರ್ಣರಾಗಬೇಕು ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಯಶಸ್ಸು ಅತ್ಯಂತ ಮಹತ್ವದ್ದಾಗಿದ್ದು, ನೈತಿಕ ಮೌಲ್ಯಗಳ ಮಾರ್ಗದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

Like & Follow Facebook Page ” Digi Malenadu “

ಎನ್ಇಎಸ್ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಪ್ರಾಚಾರ್ಯ ಡಾ. ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಸಿ.ಶ್ರೀಕಾಂತ್, ಎಂಸಿಎ ವಿಭಾಗದ ಮುಖ್ಯಸ್ಥ ಡಾ. ಹೇಮಂತ್ ಕುಮಾರ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಜಲೇಶ್ ಕುಮಾರ್, ಅನುಶ್ರೀ, ಸಹ ಪ್ರಾಧ್ಯಾಪಕ ಡಾ. ವಿಕ್ರಮ್.ವಿ ಇತರರಿದ್ದರು.

ಫೇಸ್‌ ಬುಕ್‌ :www.facebook.com/digimalenadu

ನಮ್ಮ ಬಗ್ಗೆ :https://digimalenadu.com/about-us/

ನಾವೀನ್ಯಯುತ ಚಿಂತನೆ ಸಮಾಜ ಉನ್ನತಿಕರಣದ ಶಕ್ತಿ

digimalenadu

ಶಿವಮೊಗ್ಗ
error: Content is protected !!