ಸಿಬಿಆರ್ ಕಾನೂನು ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ
ಶಿವಮೊಗ್ಗ | 28 ಮೇ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಮಾಡಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅವಶ್ಯಕ ಎಂದು ನೂತನ ನ್ಯಾಯಾಧೀಶೆ ಅನನ್ಯಾ ಶಾಸ್ತ್ರೀ ಹೇಳಿದರು.
ಶಿವಮೊಗ್ಗ SHIVAMOGGA ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಸಿ.ಭೀಮಸೇನರಾವ್ ಕಾನೂನು LAW ಮಹಾವಿದ್ಯಾಲಯದಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸೋಲಿನಿಂದ ಹೊಸ ಅನುಭವಗಳನ್ನು ಕಲಿಯುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ ಎಂದರು.
ನ್ಯಾಯಾಧೀಶೆ ಕೆ.ಎಸ್.ರಕ್ಷಿತಾ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಜೀವನ ಮೌಲ್ಯಗಳನ್ನೂ ಉಪನ್ಯಾಸಕ ವೃಂದ ಕಲಿಸಿಕೊಟ್ಟಿದೆ. ಗ್ರಾಮೀಣ ಪ್ರದೇಶದಿಂದ ಬಂದ ನಮಗೆ ಯಾವುದೇ ನ್ಯಾಯಾಂಗ ಹಿನ್ನೆಲೆ ಇರಲಿಲ್ಲ. ದೊಡ್ಡ ಕನಸುಗಳನ್ನು ಕಾಣಲು ಪ್ರಯತ್ನಿಸಬೇಕು. ಸಣ್ಣ ಅವಕಾಶವನ್ನೂ ದೊಡ್ಡ ಸಾಧನೆಗೆ ದಾರಿಯನ್ನಾಗಿ ಮಾಡಿಕೊಳ್ಳಬೇಕು. ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ NES ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಮಾತನಾಡಿ, ಪ್ರಜಾಪ್ರಭುತ್ವದ ಉಳಿವು ಮತ್ತು ರಕ್ಷಣೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಅವಲಂಬಿತವಾಗಿದೆ. ಆಳುವವರ ಅಜ್ಞಾನದಿಂದ ನ್ಯಾಯಾಂಗದ ಮೇಲೆ ಹೆಚ್ಚಿನ ಹೊರೆ ಉಂಟಾಗುತ್ತಿದೆ. ನಾವು ಅಲಂಕರಿಸುವ ಉನ್ನತ ಹುದ್ದೆಗಳು ನಮ್ಮ ಸೌಜನ್ಯತೆಯನ್ನು ಕಳೆದುಕೊಳ್ಳುವಂತೆ ಮಾಡಬಾರದು ಎಂದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ನ್ಯಾಯಾಂಗ ವ್ಯವಸ್ಥೆ ಅತ್ಯಂತ ಹೊಣೆಗಾರಿಕೆ ಕ್ಷೇತ್ರವಾಗಿದೆ. ನ್ಯಾಯ ನೀಡುವ ವ್ಯಕ್ತಿಯು ವೈಜ್ಞಾನಿಕ ಮನೋಭಾವ, ವೃತ್ತಿಪರ ನಿಷ್ಠೆ, ಸಹಾನುಭೂತಿ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರಬೇಕು ಎಂದು ತಿಳಿಸಿದರು.
ನ್ಯಾಯಾಧೀಶರ ತೀರ್ಪುಗಳು ಸಮಾಜದ ಮೇಲೆ ದೀರ್ಘಕಾಲದ ಪ್ರಭಾವ ಬೀರುತ್ತವೆ. ಆದ್ದರಿಂದ ಅವರ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಸಂಸ್ಕಾರಗಳು ಅತ್ಯಂತ ಮಹತ್ವ ಪಡೆಯುತ್ತವೆ. ನ್ಯಾಯಾಂಗ ವ್ಯವಸ್ಥೆಯ ಸೌಲಭ್ಯಗಳು ಸಾಮಾನ್ಯ ಜನರಿಗೂ ತಲುಪುವಂತೆ ನೂತನ ನ್ಯಾಯಾಧೀಶರು ಕಾರ್ಯನಿರ್ವಹಿಸಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ನೂತನ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನ್ಯಾಯಾಧೀಶೆ ಸಂಮ್ಯಕ್ತಾ ಮುಪ್ಪಾನೆ, ಎನ್ಇಎಸ್ ನಿರ್ದೇಶಕ ಎಂ.ಎಸ್. ಅನಂತದತ್ತಾ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ, ಐಕ್ಯೂಎಸಿ ಸಂಯೋಜಕ ಡಾ. ಕಾಂತರಾಜ್, ಕಾಲೇಜಿನ ಪ್ರಾಚಾರ್ಯೆ ಡಾ. ಎ.ಅನಲಾ ಉಪಸ್ಥಿತರಿದ್ದರು.
Shimoga ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
