ವಿಭಿನ್ನ ಚಿಂತನೆ ಸಾಧನೆಯ ಉತ್ತುಂಗದ ದಾರಿ
ಶಿವಮೊಗ್ಗ | 11 ಜುಲೈ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ಭವಿಷ್ಯವನ್ನು ರೂಪಿಸುವ ಶಕ್ತಿ ವಿಭಿನ್ನ ಚಿಂತನೆಯಲ್ಲಿದ್ದು, ಸಾಧನೆಯ ಉತ್ತುಂಗದ ದಾರಿಯಾಗಿ ತೆರೆದುಕೊಳ್ಳಲಿದೆ ಎಂದು ಉದ್ಯಮಿ ನಿವೇದನ್ ನೆಂಪೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ಅನ್ವಯಿಕ ವಿಜ್ಞಾನ ಕಾಲೇಜಿನಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಬಿಸಿಎ, ಬಿಎಸ್ಸಿ ವಿದ್ಯಾರ್ಥಿಗಳ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ‘ಪರಿಚಯ-2026’ ಉದ್ಘಾಟಿಸಿ ಮಾತನಾಡಿದರು.
ಇಂದಿನ ಜಗತ್ತಿನಲ್ಲಿ ಶೈಕ್ಷಣಿಕ ಅರ್ಹತೆ ಜತೆಯಲ್ಲಿ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ, ತಂತ್ರಜ್ಞಾನದ ಅರಿವು, ಸಂವಹನ ಕೌಶಲ್ಯತೆ ಮತ್ತು ನವೋದ್ಯಮದ ಮನೋಭಾವವು ಬೇಕಾಗಿದೆ. ಆದ್ದರಿಂದ ಯುವ ಸಮೂಹ ಪ್ರತಿದಿನ ಹೊಸ ಕೌಶಲ್ಯಗಳನ್ನು ಕಲಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಯುವ ಸಮೂಹವು ವಾಸ್ತವ ಜಗತ್ತಿನ ಅರಿವನ್ನು ಬೆಳೆಸಿಕೊಳ್ಳಲು ದಿನಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ಮೊಬೈಲ್ಗಳ ಅತಿಯಾದ ಬಳಕೆಯ ಮೋಹಕ್ಕೆ ಒಳಗಾಗಬೇಡಿ. ದಿನಪತ್ರಿಕೆಗಳು, ಪುಸ್ತಕಗಳು ಮತ್ತು ವಿಶ್ವಾಸಾರ್ಹ ಮಾಹಿತಿಯ ಮೂಲಗಳ ಮೂಲಕ ಜ್ಞಾನ ವಿಸ್ತರಿಸಿಕೊಳ್ಳಬೇಕು ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಬಿಸಿಎ, ಬಿಎಸ್ಸಿ ವಿಭಾಗದ 7 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎಲ್.ಅರವಿಂದ, ಪ್ಲೇಸ್ಮೆಂಟ್ ಅಧಿಕಾರಿ ಪ್ರದೀಪ್.ಜಿ.ಎಸ್, ಆಯಿಶಾ ರೆಹಮಾನ್, ಉಪನ್ಯಾಸಕ ಡಾ. ಮುಕುಂದ, ರೇಖಾ, ಲಕ್ಷ್ಮಣ್ ಇತರರಿದ್ದರು.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
